ಮಹಿಳೆಯಿಂದ ಡಿಕೆಶಿ ಕೊರಳಪಟ್ಟಿ ಹಿಡಿಸಿ, ಪೊರಕೆಯಿಂದ ಹೊಡಿಸುತ್ತೇನೆ ಎಂದ ಸಿ.ಪಿ.ಯೋಗೀಶ್ವರ

Webdunia
ಗುರುವಾರ, 4 ಜನವರಿ 2018 (16:14 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಡಿ.ಕೆ.ಶಿವಕುಮಾರ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ಸಿ.ಪಿ.ಯೋಗೀಶ್ವರ ಚನ್ನಪಟ್ಟಣದಲ್ಲಿ ಮಹಿಳೆಯೊಬ್ಬರ ಕೈಯಲ್ಲಿ ಡಿ.ಕೆ.ಶಿವಕುಮಾರ ಅವರ ಕೊರಳಪಟ್ಟಿ ಹಿಡಿಸಿ, ಪೊರಕೆಯಿಂದ ಹೊಡಿಸುತ್ತೇನೆ ಎಂದು ಹೇಳಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಬಿಜೆಪಿ ಗೆಲ್ಲುವುದಿಲ್ಲ, ಬೆಟ್ಟು ಕಟ್ಟುತ್ತೇನೆ ಎಂದು ಸಚಿವ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಮಂತ್ರಿಯಾಗಿದ್ದುಕೊಂಡು ಜೂಜಿನ ಬಗ್ಗೆ ಮಾತನಾಡಿದ್ದಾರೆ. ಡಿ.ಕೆ.ಶಿವಕುಮಾರ ಅವರು ಕನಕಪುರ ಕ್ಷೇತ್ರದಲ್ಲಿ ಸ್ಪರ್ಧಿಸದೆ ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಿದರೆ ಸಾಮಾನ್ಯ ವ್ಯಕ್ತಿಯನ್ನು ಕಣಕ್ಕಿಳಿಸಿ ಡಿಕೆಶಿ ವಿರುದ್ಧ ಗೆಲ್ಲುಸುತ್ತೇನೆ. ಈ ಸವಾಲನ್ನು ಸ್ವೀಕರಿಸಿ ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಲಿ ಎಂದಿದ್ದಾರೆ.
 
ಡಿಕೆಶಿ ನಾಲಿಗೆ ಮೇಲೆ ಹಿಡಿತವಿಲ್ಲ. ಹುಚ್ಚು ಹಿಡಿದಿರಬೇಕು. ಬಲ ಪ್ರಯೋಗ ಮಾಡಿ ಜನರನ್ನು ಕರೆತಂದರು. ಚನ್ನಪಟ್ಟಣದಲ್ಲಿ ವೀರಾವೇಶದಿಂದ ಮಾತನಾಡಿ ಜನರನ್ನು ದಾರಿ ತಪ್ಪಿಸಲು ಯತ್ನಿಸಿ ಮಾಗಡಿಯಲ್ಲಿ ನಿದ್ರೆಗೆ ಜಾರಿದ್ದಾರೆ ಎಂದು ಟೀಕಿಸಿದ್ದಾರೆ.

ಜನವರಿ 17ರಂದು ಬಿಜೆಪಿಯ ಸಮಾವೇಶ ಮಾಡಿ ಶಕ್ತಿ ಪ್ರದರ್ಶನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿಎಂ ಆಗುವ ಆಸೆ ನನಗೂ ಇದೆ: ಕಾಂಗ್ರೆಸ್ ನ ಮತ್ತೊಬ್ಬ ಪ್ರಮುಖ ಸಚಿವರಿಂದ ಬಾಂಬ್

ಅಲಿಬಾಬ 40 ಕಳ್ಳರ ಕತೆಯನ್ನು ಸಿದ್ದರಾಮಯ್ಯ ಸರ್ಕಾರದಲ್ಲೇ ನೋಡ್ತಿದ್ದೇವೆ: ಆರ್ ಅಶೋಕ್

ಮುಂದಿನ ಸುದ್ದಿ
Show comments