Select Your Language

Notifications

webdunia
webdunia
webdunia
webdunia

ಕರಕುಶಲಕರ್ಮಿಗಳಿಗೆ ಪ್ರೋತ್ಸಾಹ ಅಗತ್ಯ: ನಟಿ ನೇಹಾ ಪಾಟೀಲ್‌

ಕರಕುಶಲಕರ್ಮಿಗಳಿಗೆ ಪ್ರೋತ್ಸಾಹ ಅಗತ್ಯ: ನಟಿ ನೇಹಾ ಪಾಟೀಲ್‌
bangalore , ಶುಕ್ರವಾರ, 20 ಆಗಸ್ಟ್ 2021 (20:54 IST)
•ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆರ್ಟಿಸನ್ಸ್‌ ಬಜಾರ್‌ ಗೆ ಚಾಲನೆ
•“ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮೇಳ”
•ಆಗಸ್ಟ್‌ 20 ರಿಂದ ಆಗಸ್ಟ್‌ 29 ರವರೆಗೆ ಬೆಳಿಗ್ಗೆ 11 ರಿಂದ ಸಂಜೆ ೭ ಗಂಟೆಯವರೆಗೆ
 
ಬೆಂಗಳೂರು ಆಗಸ್ಟ್‌ 20: ಕರೋನಾ ಲಾಕ್‌ಡೌನ್‌ ನಿಂದಾಗಿ ತೊಂದರೆಗೀಡಾಗಿರುವ ಕರಕುಶಲಕರ್ಮಿಗಳಿಗೆ ಪ್ರೋತ್ಸಾಹದ ಅಗತ್ಯವಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಆಯೋಜಿಸಲಾಗಿರುವ ಕರಕುಶಲ ವಸ್ತುಗಳ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಭೇಟಿ ನೀಡಿ ಎಂದು ನಟಿ ನೇಹಾ ಪಾಟೀಲ್‌ ಹೇಳಿದರು. 
 
ಇಂದು ನಗರದ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಇಂದಿನಿಂದ 10 ದಿನಗಳ ಕಾಲ ಆಯೋಜಿಸಲಾಗಿರುವ ಆರ್ಟಿಸನ್ಸ್‌ ಬಜಾರ ನ್ನು ಉದ್ಘಾಟಿಸಿ ಮಾತನಾಡಿದರು. ಕರೋನಾ ಸಾಂಕ್ರಾಮಿಕ ರೋಗ ಎಲ್ಲಾ ಕ್ಷೇತ್ರದ ಜನರನ್ನೂ ತೊಂದರೆಗೀಡು ಮಾಡಿದೆ. ಅದರಲ್ಲೂ ಮಾರಕಟ್ಟೆಯ ಕೊರತೆಯನ್ನು ಅನುಭವಿಸುತ್ತಿರುವ ಕರಕುಶಲಕರ್ಮಿಗಳಿಗಂತೂ ಇದರ ಹೊಡೆತ ಹೆಚ್ಚಾಗಿಯೇ ಇದೆ. ಈ ನಿಟ್ಟಿನಲ್ಲಿ ಅವರಿಗೆ ಪ್ರೋತ್ಸಾಹ ಹಾಗೂ ಅವರ ವಸ್ತುಗಳಿಗೆ ಅಗತ್ಯವಿರುವ ಮಾರುಕಟ್ಟೆಯನ್ನು ಒದಗಿಸುವ ನಿಟ್ಟಿನಲ್ಲಿ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಲಾಗಿರುವ ಆರ್ಟಿಸನ್ಸ್‌ ಬಜಾರ್‌ ಗೆ ಭೇಟಿ ನೀಡಿ ಎಂದು ನಟಿ ನೇಹಾ ಪಾಟೀಲ್‌ ಕರೆ ನೀಡಿದರು. 
 
ಕರ್ನಾಟಕ ಚಿತ್ರಕಲಾ ಪರಿಷತ್‌ ಆವರಣದಲ್ಲಿ ಆಗಸ್ಟ್‌ 20 ರಿಂದ ಆಗಸ್ಟ್‌ 29 ರ ವರೆಗೆ ಬೆಳಿಗ್ಗೆ 11 ರಿಂದ ಸಂಜೆ ೭ ಗಂಟೆಯವರೆಗೆ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಿದೆ. ಕೋವಿಡ್‌ ಹರಡದಂತೆ ಎಲ್ಲಾ ರೀತಿಯ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರವೇಶ ಉಚಿತವಾಗಿದೆ. 
 
ಅಲಂಕಾರಿಕ ವಸ್ತುಗಳ ಜೊತೆಯಲ್ಲಿಯೇ ಮನೆ ಮಂದಿಗೆ ಬೇಕಾಗಿರುವ ಬಟ್ಟೆಗಳು ಹಾಗೂ ಇನ್ನಿತರೆ ವಸ್ತುಗಳನ್ನು ಕೊಳ್ಳಬಹುದಾಗಿದೆ. 80 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಪ್ರಮುಖ ಆಕರ್ಷಣೆಯಾಗಿರಲಿವೆ. ಇದರ ಜೊತೆಯಲ್ಲಿಯೇ, ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್‌ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್‌ ಲೂಮ್‌ ಸ್ಯಾರಿಯನ್ನು ಸೆಲೆಕ್ಟ್‌ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯವರು ಕಳ್ಳರಂತೆ ಗಮನ ಬೇರೆಡೆ ಸೆಳೆದು ಜೇಬಿಗೆ ಕತ್ತರಿ ಹಾಕುವಂತೆ ಬೆಲೆ ಏರಿಕೆ