Webdunia - Bharat's app for daily news and videos

Install App

ಕ್ರಿಕೆಟ್ ಬೆಟ್ಟಿಂಗ್: ನಾಲ್ವರ ಬಂಧನ, 4 ಲಕ್ಷ ನಗದು ವಶ

Webdunia
ಗುರುವಾರ, 26 ಮಾರ್ಚ್ 2015 (15:59 IST)
ಇಂದು ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ವಿಶ್ವಕಪ್ 2015ರ ಎರಡನೇ ಸೆಮಿ ಫೈನಲ್ ಪಂದ್ಯದಲ್ಲಿ ಹಣಾಹಣಿ ನಡೆಸುತ್ತಿದ್ದು, ನಗರದಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ನಾಲ್ವರು ಬುಕ್ಕಿಗಳನ್ನು ನಗರ ಪೊಲೀಸರು ಇಂದು ಬಂಧಿಸಿದ್ದಾರೆ. 
 
ಬಂಧಿತ ಬುಕ್ಕಿಗಳನ್ನು ಜೀತೇಂದ್ರ ಜೈನ್ ಮತ್ತು ಮುಕೇಶ್ ಕುಮಾರ್ ಜೈನ್ ಸೇರಿ ಇತರೆ ಇಬ್ಬರು ಎನ್ನಲಾಗಿದ್ದು, ನಾಲ್ವರನ್ನೂ ಕೂಡ ಬಂಧಿಸಲಾಗಿದೆ. ಬಂಧಿತರಿಂದ ನಾಲ್ಕು ಲಕ್ಷ ನಗದು, 2 ಲ್ಯಾಪ್‌ಟಾಪ್, 11 ಮೊಬೈಲ್ ಹಾಗೂ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. 
 
ಇನ್ನು ಬಂಧಿತರು ನಗರದ ಮೀನಾಲ್ ಬೊಟಿಕ್ ಹೋಟೆಲ್‌ನಲ್ಲಿ ಆನ್ ಲೈನ್ ಮೂಲಕ ಬೆಟ್ಟಿಂಗ್ ನಡೆಸುತ್ತಾ ತಮ್ಮ ಕೈ ಚಳಕ ತೋರುತ್ತಿದ್ದರು ಎನ್ನಲಾಗಿದ್ದು, ಈ ಬೆಟ್ಟಿಂಗ್ ಪ್ರಕರಣದಲ್ಲಿ ಪ್ರತ್ಯೇಕ ಸ್ಥಳಗಳಿಂದ ಇತರೆ 30ಕ್ಕೂ ಅಧಿಕ ಮಂದಿ ಹಣ ತೊಡಗಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 
 
ಪ್ರಕರಣವು ನಗರದ ಅಶೋಕನಗರ ಠಾಣಾ ವ್ಯಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments