Select Your Language

Notifications

webdunia
webdunia
webdunia
webdunia

ಮನೆ ಬಿಟ್ಟು ಹೊರಬಂದರೆ ಬೀಳುತ್ತೆ ಕ್ರಿಮಿನಲ್ ಕೇಸ್

ಮನೆ ಬಿಟ್ಟು ಹೊರಬಂದರೆ ಬೀಳುತ್ತೆ ಕ್ರಿಮಿನಲ್ ಕೇಸ್
ಕಲಬುರಗಿ , ಸೋಮವಾರ, 25 ಮೇ 2020 (21:18 IST)
ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಹೋಂ ಕ್ವಾರಂಟೈನ್ ನಲ್ಲಿರುವ ವ್ಯಕ್ತಿಗಳು ಗೃಹ ಬಂಧನ ಉಲ್ಲಂಘಿಸಿ ಸಾರ್ವಜನಿಕವಾಗಿ ಓಡಾಡಿದಲ್ಲಿ ಅಂತಹವರ ಮೇಲೆ ಪೊಲೀಸ್‌ ಠಾಣೆಯಲ್ಲಿ ಎಫ್.ಐ.ಆರ್. ದಾಖಲಿಸಲಾಗುವುದು.

ಹೀಗಂತ ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಎಚ್ಚರಿಕೆ ನೀಡಿದ್ದಾರೆ.

ಕೋವಿಡ್-19 ಸೋಂಕಿತ ವ್ಯಕ್ತಿಯ ಎರಡನೇ ಸಂಪರ್ಕದಲ್ಲಿ ಬಂದ ವ್ಯಕ್ತಿಗಳನ್ನು, ಹೊರ ರಾಜ್ಯದಿಂದ ಬಂದ ಗರ್ಭಿಣಿಯರು, 10 ವರ್ಷದೊಳಗಿನ ಮಕ್ಕಳು, 65ವರ್ಷ ಮೇಲ್ಪಟ್ಟ ಹಿರಿಯರು & ಇನ್ನಿತರ ರೋಗಗಳಿಂದ ಬಳಲುತ್ತಿರುವವರ ಹಿತದೃಷ್ಟಿಯಿಂದ ಸಾಂಸ್ಥಿಕ ಕ್ವಾರಂಟೈನ್ ಬದಲಾಗಿ ಹೋಂ ಕ್ವಾರಂಟೈನ್ ನಲ್ಲಿ ಇಡಲಾಗುತ್ತಿದೆ.

ಆದರೆ ಕೆಲವರು ಹೋಂ ಕ್ವಾರಂಟೈನ್ ಉಲ್ಲಂಘಿಸಿ ಸಾರ್ವಜನಿಕವಾಗಿ ಓಡಾಡುತ್ತಿರುವುದು ಗಮನಕ್ಕೆ ಬಂದಿದೆ.  ಮೊದಲ ಬಾರಿಗೆ ಈ ರೀತಿಯಾಗಿ ಉಲ್ಲಂಘನೆ ಮಾಡಿರುವುದು ಕಂಡುಬಂದಲ್ಲಿ ಕೂಡಲೆ ಅಂತವರನ್ನು ಸಾಂಸ್ಥಿಕ ಕ್ವಾರಂಟೈನ್ ಗೆ ದಾಖಲಿಸಲಾಗುತ್ತದೆ. ಮೇಲಿಂದ‌ ಮೇಲೆ  ಇದೇ ರೀತಿ ತಪ್ಪು ಮರುಕಳುಹಿಸಿದಲ್ಲಿ ಅಂತಹವರ ಮೇಲೆ ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಿಸಲಾಗುವುದು ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಬಿ.ಎಸ್.ಯಡಿಯೂರಪ್ಪರನ್ನು ಹಾಡಿ ಹೊಗಳಿದ ಬಿ.ಶ್ರೀರಾಮುಲು