ಜೆಡಿಎಸ್ ಶಾಸಕರ ಕ್ಷೇತ್ರಕ್ಕೆ ಸಿಎಂ ಯಿಂದ ಸಿಕ್ಕಿದೆ ಕೋಟಿ ಕೋಟಿ ಅನುದಾನ

ಗುರುವಾರ, 20 ಜೂನ್ 2019 (10:20 IST)
ಬೆಂಗಳೂರು : ಅನುದಾನದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಬಿಜೆಪಿ ಆರೋಪ ಮಾಡಿದ ಬೆನ್ನಲೇ ಇದೀಗ ಜೆಡಿಎಸ್ ಶಾಸಕರಿರುವ ಕ್ಷೇತ್ರಕ್ಕೆ ಕೋಟಿ ಕೋಟಿ ರೂಪಾಯಿ ಬಂಪರ್ ಅನುದಾನ ಸಿಕ್ಕಿದೆ ಎಂಬ ವಿಚಾರ ತಿಳಿದುಬಂದಿದೆ.
ಅನುದಾನದಲ್ಲಿ ಸಿಎಂ ಕುಮಾರಸ್ವಾಮಿ ತಾರತಮ್ಯ ಮಾಡುತ್ತಿದ್ದಾರೆ. ಜೆಡಿಎಸ್ ಶಾಸಕರಿರುವ ಕ್ಷೇತ್ರಕ್ಕೆ ಹೆಚ್ಚೆಚ್ಚು ಅನುದಾನ ನೀಡುತ್ತಿದ್ದಾರೆ ಎಂದು ಬಿಜೆಪಿಯವರು ಆರೋಪ ಮಾಡಿದ್ದರು.


ಈ ಆರೋಪಕ್ಕೆ ಪುಷ್ಟಿ ನೀಡುವಂತೆ ಮಧುಗಿರಿ ಕ್ಷೇತ್ರಕ್ಕೆ ರೂ.947 ಕೋಟಿ. ಅನುದಾನ ಸಿಕ್ಕಿದೆ ಎಂಬುದಾಗಿ ತಿಳಿದುಬಂದಿದೆ. ಇದೀಗ ಕ್ಷೇತ್ರಕ್ಕೆ ಸಿಕ್ಕ ಅನುದಾನಗಳ ಸರಮಾಲೆ ಬಿಚ್ಚಿಟ್ಟ ಮಧುಗಿರಿ ಜೆಡಿಎಸ್ ಶಾಸಕ ಎಂ.ವಿ.ವೀರಭದ್ರಯ್ಯ, ಇದೆಲ್ಲಾ ಕುಮಾರಣ್ಣನ ಕೃಪೆ ಎಂದು ಹೇಳಿದ್ದಾರೆ. ಈ ಮೂಲಕ ಬಿಜೆಪಿ ಆರೋಪ ನಿಜ ಎಂಬ ಅನುಮಾನ ವ್ಯಕ್ತವಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಸಿಎಂ ಗ್ರಾಮವಾಸ್ತವ್ಯದ ಬಗ್ಗೆ ಸದಾನಂದ ಗೌಡರು ವ್ಯಂಗ್ಯ