ದೇಶದಲ್ಲೇ ಮೊದಲ ಬಾರಿಗೆ ತನ್ನ ಸಿಬ್ಬಂದಿಗೆ ಒಂದು ಕೋಟಿ ರೂಪಾಯಿ ಮೊತ್ತದ ಅಪಘಾತ ವಿಮೆ ಯೋಜನೆ ಜಾರಿಗೆ ತಂದಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕೊಟ್ಟ ಮಾತಿನಂತೆ ನಡೆದುಕೊಂಡಿದೆ.
ಕಳೆದ ನವೆಂಬರ್ನಲ್ಲಿ ಕೆಎಸ್ಆರ್ಟಿಸಿ ನಿಗಮ ತನ್ನ ನೌಕರರಿಗೆ ಒಂದು ಕೋಟಿ ರೂಪಾಯಿ ಮೊತ್ತದ ಅಪಘಾತ ವಿಮೆ ಯೋಜನೆ ಜಾರಿ ಮಾಡಿತ್ತು. ಈ ಹಿಂದೆ ಅಪಘಾತ ವಿಮಾ ಯೋಜನೆಗೆ ಸಂಬಂಧಿಸಿದಂತೆ ಎಸ್ಬಿಐನೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯಂತೆ 50 ಲಕ್ಷ ರೂಪಾಯಿ ಹಾಗೂ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಸಂಸ್ಥೆಯೊಂದಿಗೆ ಮಾಡಿಕೊಂಡ ಒಡಂಬಡಿಕೆಯ 50 ಲಕ್ಷ ರೂಪಾಯಿ ಸೇರಿ ಒಟ್ಟು ಒಂದು ಕೋಟಿ ರೂಪಾಯಿ ಅಪಘಾತ ವಿಮೆಯನ್ನು ಸಿಬ್ಬಂದಿಗೆ ನೀಡುವುದಾಗಿ ಘೋಷಿಸಿದೆ.