Select Your Language

Notifications

webdunia
webdunia
webdunia
webdunia

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

Congress MLA KC Virendra, money laundering case, Enforcement Directorate

Sampriya

ಬೆಂಗಳೂರು , ಭಾನುವಾರ, 24 ಆಗಸ್ಟ್ 2025 (15:10 IST)
Photo Credit X
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರನ್ನು ಇಲ್ಲಿನ 35ನೇ ಸಿಸಿಹೆಚ್ ಆಗಸ್ಟ್ 28ರ ವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಿದೆ. 

ಹೆಚ್ಚಿನ ವಿಚಾರಣೆಗಾಗಿ ಶಾಸಕ ಕೆ.ಸಿ ವೀರೇಂದ್ರ ಅವರನ್ನು 14 ದಿನ ತಮ್ಮ ವಶಕ್ಕೆ ನೀಡುವಂತೆ ಇಡಿ ಮನವಿ ಮಾಡಿತ್ತು. ಇಡಿ ವಶಕ್ಕೆ ನೀಡುವ ಅವಶ್ಯಕತೆ ಇಲ್ಲ ಎಂದು ವಿರೇಂದ್ರ ಪಪ್ಪಿ ಪರ ವಕೀಲರ ಮನವಿವನ್ನು ಕೋರ್ಟ್‌ ತಿರಸ್ಕರಿಸಿತು.

ಶಾಸಕರ ಬಳಿ ಕೋಟ್ಯಾಂತರ ರೂ. ನಗದು ಕೆಜಿ ಗಟ್ಟಲೇ ಚಿನ್ನ ಪತ್ತೆಯಾಗಿದೆ. ವಿದೇಶದಲ್ಲಿ ವ್ಯವಹಾರ ನಡೆಸಿದ್ದಾರೆ. ಕಸಿನೋಗಳು, ಆನ್ಲೈನ್ ಬೆಟ್ಟಿಂಗ್ ಸೈಟ್​ಗಳ ವ್ಯವಹಾರ ನಡೆದಿದೆ. ಕೋಟ್ಯಾಂತರ ರೂ. ಅಕ್ರಮ ವಹಿವಾಟು ನಡೆಸಿದ್ದಾರೆ. ಈ ಬಗ್ಗೆ ವಿಚಾರಣೆ ಅಗತ್ಯ ಇದೆ. ಹೀಗಾಗಿ 14 ದಿನ ವಿಚಾರಣೆ ನಡೆಸಲು ಅವಶ್ಯಕತೆ ಇದೆ ಎಂದು ಇಡಿ ಪರ ವಕೀಲರು ಮನವಿ ಮಾಡಿದರು. ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಧೀಶ ಸೈಯದ್ ಬಿ ರೆಹಮಾನ್ ಅವರು, ಆಗಸ್ಟ್​ 28ರ ವರೆಗೆ ಇಡಿ ವಶಕ್ಕೆ ನೀಡಿ ಆದೇಶಿಸಿದ್ದಾರೆ.

ವೀರೇಂದ್ರ ಒಡೆತನದ ಕಂಪನಿಗಳಿಂದ ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಮತ್ತು ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದಿತ್ತು. ಈ ಸಂಬಂಧ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶುಕ್ರವಾರ ಕೆ.ಸಿ.ವೀರೇಂದ್ರ ಹಾಗೂ ಅವರ ಸಹೋದರರ ಮನೆಗಳ ಮೇಲೆ ದಾಳಿ ನಡೆಸಿದ್ದರು. ಚಿತ್ರದುರ್ಗ, ಚಳ್ಳಕೆರೆ, ಬೆಂಗಳೂರು, ಗೋವಾ ಸೇರಿದಂತೆ 30 ಕಡೆಗಳಲ್ಲಿ ದಾಳಿ ಮಾಡಿದರು.

 ಶಾಸಕ ಕೆ.ಸಿ.ವೀರೇಂದ್ರ ಮನೆಗಳು, ಕಂಪನಿಗಳು ಮತ್ತು ಇತರರ ಮನೆ, ಕಚೇರಿಗಳು ಸೇರಿ 30 ಕಡೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದರು. ಕೆಸಿ ವೀರೇಂದ್ರ ಅವರನ್ನು ಇಡಿ ಅಧಿಕಾರಿಗಳು ಸಿಕ್ಕಿಂನಲ್ಲಿ ಬಂಧಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ: ಪ್ರತಾಪಸಿಂಹ ಪ್ರಶ್ನೆ