Select Your Language

Notifications

webdunia
webdunia
webdunia
webdunia

ಹಾಸನಾಂಬ ದರ್ಶನಕ್ಕೆ ಜನಸಾಗರ

Crowds for Hasanamba darshan
ಹಾಸನ , ಗುರುವಾರ, 20 ಅಕ್ಟೋಬರ್ 2022 (21:07 IST)
ಹಾಸನ ಜಿಲ್ಲೆಯ ಐತಿಹಾಸಿಕ ದೇವಸ್ಥಾನವಾದ ಹಾಸನಾಂಬೆ ದೇವರ ದರ್ಶನೋತ್ಸವ ಪ್ರಾರಂಭವಾಗಿ 7 ದಿನಗಳು ಕಳೆದಿದೆ. ಇಂದು 8ನೇ ದಿನದ ದರ್ಶನ ಆರಂಭವಾಗಿದ್ದು, ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜ್ಯದ ಮೂಲೆ ಮೂಲೆಯಿಂದ ಸಾವಿರಾರು ಭಕ್ತರು ತಂಡೋಪತಂಡವಾಗಿ ಆಗಮಿಸುತ್ತಿದ್ದು, ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ. ದೇವಾಲಯದ ಸುತ್ತ ಜನಜಂಗುಳಿಯಿಂದ ತುಂಬಿ ತುಳುಕುತ್ತಿದೆ. ನಿರೀಕ್ಷೆಗೂ ಮೀರಿ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸರತಿ ಸಾಲಿನ ಕೆಲವೆಡೆ ನೂಕುನುಗ್ಗಲು, ತಳ್ಳಾಟಗಳು ಸಂಭವಿಸಿದೆ. ನಿನ್ನೆ ಕೆಲ ಸಮಯ ದೇವಾಲಯದ ಮುಂಭಾಗದಲ್ಲಿ ಹೆಚ್ಚಿನ ಜನರು ಆಗಮಿಸಿದ್ದರಿಂದ ಭಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ಪೈಸ್ ಜೆಟ್ ಪೈಲಟ್​ಗಳಿಗೆ ವೇತನ ಹೆಚ್ಚಳ