Webdunia - Bharat's app for daily news and videos

Install App

ಕಾಂಗ್ರೆಸ್ಸಿನವರದು ಸರಕಾರಿ ಪ್ರಾಯೋಜಿತ ಭಯೋತ್ಪಾದನೆಯೇ: ಸಿ.ಟಿ.ರವಿ ಪ್ರಶ್ನೆ

Krishnaveni K
ಮಂಗಳವಾರ, 20 ಆಗಸ್ಟ್ 2024 (17:12 IST)
ಬೆಂಗಳೂರು: ಕಾಂಗ್ರೆಸ್ಸಿನವರದು ಸರಕಾರಿ ಪ್ರಾಯೋಜಿತ ಭಯೋತ್ಪಾದನೆಯೇ ಅಥವಾ ಸರಕಾರಿ ಪ್ರಾಯೋಜಿತ ಬೆದರಿಕೆಯೇ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರಶ್ನಿಸಿದರು. 
 
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಾಸಿಕ್ಯೂಶನ್‍ಗೆ ರಾಜ್ಯಪಾಲರು ಅನುಮತಿ ಕೊಟ್ಟದ್ದನ್ನೇ ಅಪರಾಧ ಎಂದು ಬಿಂಬಿಸಿ ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವ ಮಾತು ದುರುದೃಷ್ಟಕರ ಮತ್ತು ಸಂವಿಧಾನವಿರೋಧಿ ಎಂದು ಆಕ್ಷೇಪಿಸಿದರು.

ಒಬ್ಬ ಎಂಎಲ್‍ಸಿ ಐವಾನ್ ಡಿಸೋಜ ಅವರು ಬಾಂಗ್ಲಾ ಮಾದರಿ ದಾಳಿ ಮಾಡಬೇಕಾಗುತ್ತದೆ ಎನ್ನುತ್ತಾರೆ. ಇದರರ್ಥ ಏನು? ಇನ್ನೊಬ್ಬರು ರಾಜ್ಯಪಾಲರು ಹಾಸಿಗೆ ದಿಂಬು ಕಟ್ಟಿಕೊಂಡು ಓಡಬೇಕಾಗುತ್ತದೆ ಎನ್ನುತ್ತಾರೆ. ರಾಜ್ಯಪಾಲರ ತೀರ್ಮಾನ ಸರಿಯೇ ತಪ್ಪೇ ಎಂದು ಪ್ರಶ್ನಿಸಲು ಸಂವಿಧಾನ ಅವಕಾಶ ಮಾಡಿಕೊಟ್ಟಿದೆ. ಪ್ರಶ್ನಿಸಲು ಅವಕಾಶವಿದೆ. ನ್ಯಾಯಾಲಯಕ್ಕೆ ಹೋದಾಗ ಅಲ್ಲಿ 29ರವರೆಗೆ ಅಂದರೆ 10 ದಿನ ತಡೆಯಾಜ್ಞೆ ನೀಡಿದ್ದಾರೆ. ಹಾಗಿದ್ದರೆ ಈ ದೂರುದಾರರು ನ್ಯಾಯಾಧೀಶರ ಮೇಲೆ ಸ್ಟ್ರೈಕ್ ಮಾಡಿದರೆ ಹೇಗಿದ್ದೀತು ಎಂದು ಕೇಳಿದರು.
 
ಕಾಂಗ್ರೆಸ್ ಪಕ್ಷ ತನಿಖೆಯನ್ನೇ ಯಾಕೆ ವಿರೋಧಿಸುತ್ತಿದೆ ?

ಒಂದು ವೇಳೆ ನ್ಯಾಯಾಧೀಶರು ಸಿದ್ದರಾಮಯ್ಯನವರ ವಿರುದ್ಧ ತೀರ್ಪು ಕೊಟ್ಟರೆ ನ್ಯಾಯಾಧೀಶರ ವಿರುದ್ಧ ಇವರು ದಂಗೆ ಏಳಿಸ್ತಾರಾ? ಅವರ ಪ್ರತಿಕೃತಿ ದಹನ ಮಾಡುವರೇ? ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರಾ? ಎಂದು ಸಿ.ಟಿ.ರವಿ ಅವರು ಪ್ರಶ್ನೆಗಳನ್ನು ಮುಂದಿಟ್ಟರು.

ರಾಜ್ಯಪಾಲರದು ಸಾಂವಿಧಾನಿಕ ಹುದ್ದೆ. ಸಂವಿಧಾನದತ್ತ ಅಧಿಕಾರ ಬಳಸಿ ಅವರು ಪ್ರಾಸಿಕ್ಯೂಶನ್‍ಗೆ ಅನುಮತಿ ಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷ ತನಿಖೆಯನ್ನೇ ಯಾಕೆ ವಿರೋಧಿಸುತ್ತಿದೆ ಎಂದು ಕೇಳಿದರು. ರಾಜ್ಯಪಾಲರು ಸಿದ್ದರಾಮಯ್ಯನವರು ಅಪರಾಧಿ ಎಂದು ಹೇಳಿಲ್ಲ ಎಂದರು.
 
ಪ್ರತಿಭಟನೆ ವೇಳೆ ಕಲ್ಲು ತೂರಾಟ ಮಾಡಿದ್ದಾರೆ. ಟೈರ್‍ಗಳನ್ನೂ ಸುಟ್ಟಿದ್ದಾರೆ. ಇವರು ಕರ್ನಾಟಕವನ್ನು ಏನು ಮಾಡಲು ಹೊರಟಿದ್ದಾರೆ ಎಂದು ಕೇಳಿದರು. ಈ ದೇಶದಲ್ಲಿ ಎರಡು ಬಾರಿ ಸಿಎಂ ಆದ, ಅಗಾಧ ಅನುಭವವುಳ್ಳ ಸಿದ್ದರಾಮಯ್ಯನವರು ಸೇರಿ ಯಾರು ಕೂಡ ಸಂವಿಧಾನಕ್ಕಿಂತ ಮೇಲಲ್ಲ ಎಂದು ನೆನಪಿಸಿಕೊಟ್ಟರು. ಸಿದ್ದರಾಮಯ್ಯನವರು ಸಂವಿಧಾನಕ್ಕಿಂತ ಮೇಲೆ ಎಂದು ತಿಳಿದುಕೊಳ್ಳುವುದು ಅಹಂಕಾರದ ಭಾವನೆ ಎಂದು ತಿಳಿಸಿದರು.

ಐವಾನ್ ಡಿಸೋಜ ಸೇರಿದಂತೆ ಯಾರ್ಯಾರು ರಾಜ್ಯಪಾಲರಿಗೆ ಬೆದರಿಕೆ ಹಾಕಿದ್ದರೋ, ಯಾರ್ಯಾರು ದಾಳಿ ಮಾಡುವುದಾಗಿ ಬೆದರಿಸಿದ್ದಾರೋ, ಭಯೋತ್ಪಾದಕರ ಥರ ಮಾತನಾಡಿದ್ದಾರೋ ಅವರ ವಿರುದ್ಧ ಪೊಲೀಸ್ ಮಹಾ ನಿರ್ದೇಶಕರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕಿತ್ತು. ಎಷ್ಟೋ ಪ್ರಕರಣಗಳಲ್ಲಿ ದೂರುದಾರರೇ ಇಲ್ಲದೆ, ನೀವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದೀರಿ. ಆದರೆ, ಇಲ್ಲಿ ಇನ್ನೂ ಯಾಕೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಲ್ಲ ಎಂದು ಕೇಳಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments