Select Your Language

Notifications

webdunia
webdunia
webdunia
webdunia

ಸಿ.ಟಿ ರವಿ ಕೇಸ್‌ ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರು ಜನಪ್ರತಿನಿಧಿ ನ್ಯಾಯಾಲಯಕ್ಕೆ ಶಿಫ್ಟ್‌

ಸಿ.ಟಿ ರವಿ ಕೇಸ್‌ ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರು ಜನಪ್ರತಿನಿಧಿ ನ್ಯಾಯಾಲಯಕ್ಕೆ ಶಿಫ್ಟ್‌

Sampriya

ಬೆಳಗಾವಿ , ಶುಕ್ರವಾರ, 20 ಡಿಸೆಂಬರ್ 2024 (14:23 IST)
Photo Courtesy X
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಸಂವಿಧಾನಿಕ ಪದಬಳಕೆ ಆರೋಪ ಪ್ರಕರಣದಲ್ಲಿ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯಿತು.

ಸಿ.ಟಿ ರವಿ ಅವರನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬೆಳಗಾವಿ 5ನೇ ಜೆಎಂಎಫ್‌ಸಿ ಕೋರ್ಟ್‌ನ ನ್ಯಾಯಾಧೀರಾದ ಸ್ಪರ್ಶಾ ಡಿಸೋಜ ಅವರು ಆದೇಶಿಸಿದ್ದಾರೆ. ಅದರಂತೆ ಟ್ರಾಂಜಿಟ್ ವಾರೆಂಟ್ ಮೇಲೆ ಪೊಲೀಸರು ಸಿ.ಟಿ ರವಿ ಅವರನ್ನ ಕರೆತರಲಿದ್ದಾರೆ.

ಬೆಳಗಾವಿ ಕೋರ್ಟ್‌ಗೆ ಸಿ.ಟಿ ರವಿ ಅವರನ್ನು ಇಂದು ಬೆಳಗ್ಗೆ  ಹಿರೇಬಾಗೇವಾಡಿ ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ವಕೀಲರು ಜಾಮೀನು ನೀಡುವಂತೆ ಮನವಿ ಮಾಡಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ಕೋರ್ಟ್‌ ಆದೇಶ ಕಾಯ್ದಿರಿಸಿತ್ತು. ತನಿಖಾಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಕರೆದೊಯ್ಯಲು ಅನುಮತಿ ನೀಡುವಂತೆ ಮನವಿ ಮಾಡಿದ್ರು. ಅದಕ್ಕೆ ಕೋರ್ಟ್‌ ಅನುಮತಿ ನೀಡಿದೆ ಎಂದು ತಿಳಿದುಬಂದಿದೆ.

ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರು ತಲುಪುವ ಅವಧಿ ಹೊರತುಪಡಿಸಿ, ಬೆಂಗಳೂರು ತಲುಪಿದ ಕೂಡಲೇ ಜನ ಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರು ಪಡಿಸಲು ಸೂಚನೆ ನೀಡಲಾಗಿದೆ. ಅಲ್ಲದೇ ಯಾವುದೇ ರೀತಿಯ ತೊಂದರೆ ಎಚ್ಚರವಹಿಸುವಂತೆಯೂ ಕೋರ್ಟ್‌ ತಾಕೀತು ಮಾಡಿದೆ. ಅದರಂತೆ ಸಿ.ಟಿ. ರವಿ ಅವರನ್ನು ಬೆಂಗಳೂರಿನತ್ತ ಕರೆತರಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರವಿ ಹಲ್ಲೆ ಯತ್ನಕ್ಕೆ ಎಚ್‌ಡಿಕೆ ಖಂಡನೆ: ಅಶ್ಲೀಲ ಪದ ಬಳಸಿದ್ದರೆ ಸಮರ್ಥಿಸಲ್ಲ ಎಂದ ಕೇಂದ್ರ ಸಚಿವ