ಮಂಡ್ಯ: ನಾಗಮಂಗಲದಲ್ಲಿಗಣೇಶ ಮೆರವಣಿಗೆ ಮಾಡುತ್ತಿದ್ದ ಹಿಂದೂಗಳ ಮೇಲೆ ಅನ್ಯಕೋಮಿನವರು ದಾಳಿ ನಡೆಸಿರುವುದನ್ನು ಶಾಸಕ ಸಿಟಿ ರವಿ ಖಂಡಿಸಿದ್ದಾರೆ. ಈ ಪ್ರಕರಣದಲ್ಲಿ ಹಿಂದೂಗಳನ್ನು ಬಂಧಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಸೀದಿ ಮತ್ತು ದರ್ಗಾ ರಸ್ತೆಯ ಮುಂದೆ ಮೆರವಣಿಗೆ ಸಾಗುತ್ತಿದ್ದಾಗ ಅಡ್ಡಿಪಡಿಸಿದ ಅನ್ಯಕೋಮಿನ ಯುವಕರು ಬಳಿಕ ಮೆರವಣಿಗೆ ಸಾಗುತ್ತಿದ್ದವರ ಮೇಲೆ ಸಿಕ್ಕ ಸಿಕ್ಕಂತೆ ಕಲ್ಲು ತೂರಾಟ ನಡೆಸಿದ್ದಾರೆ. ಇಷ್ಟಕ್ಕೇ ನಿಲ್ಲದೇ ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿ ದಾಳಿ ನಡೆಸಿದ್ದಾರೆ.
ಅದರೆ ಇದೀಗ ಮೆರವಣಿಗೆ ನಡೆಸುತ್ತಿದ್ದ ಸಮಿತಿಯ ಸದಸ್ಯರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಈ ವಿಚಾರವಾಗಿ ಶಾಸಕ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂಸಾಚಾರ ಮಾಡಿದವರು ಮುಸ್ಲಿಮರು, ಆದರೆ ಬಂಧಿಸಿರುವುದು ಗಣೇಶ ಸಮಿತಿ ಸದಸ್ಯರನ್ನು. ಇದು ಯಾವ ನ್ಯಾಯ ಎಂದು ಸಿಟಿ ರವಿ ಹೇಳಿದ್ದಾರೆ.
ನಾಗಮಂಗಲ ಗಲಭೆ ಒಂದು ಸಮುದಾಯದ ಪುಂಡರ ಉದ್ದೇಶಪೂರ್ವಕ ದಾಂಧಲೆ. ಪೆಟ್ರೋಲ್ ಬಾಂಬ್ ಎಸೆದು ಗಲಭೆಗೆ ಪ್ರಚೋದನೆ ನೀಡಿದ ಮುಸ್ಲಿಮ್ ಗಲಭೆಕೋರರನ್ನು ಬಂಧಿಸುವುದನ್ನು ಬಿಟ್ಟು ಸಮಿತಿಯ ಸದಸ್ಯರನ್ನು ಬಂಧಿಸಿದ ಪೊಲೀಸರ ಕೃತ್ಯ ಅಕ್ಷಮ್ಯ. ಕೂಡಲೇ ಉನ್ನತ ಮಟ್ಟದ ತನಿಖೆ ನಡೆಸಿ, ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ ಎಂದು ಸಿಟಿ ರವಿ ಆಗ್ರಹಿಸಿದ್ದಾರೆ.