Webdunia - Bharat's app for daily news and videos

Install App

ಬಿಜೆಪಿ ಪಾದಯಾತ್ರೆಯ ನಿಜ ಉದ್ದೇಶ ತಿಳಿಸಿದ ಸಿಟಿ ರವಿ

Krishnaveni K
ಸೋಮವಾರ, 29 ಜುಲೈ 2024 (15:06 IST)
ಬೆಂಗಳೂರು: ಜನರಿಗೆ ಸತ್ಯವನ್ನು ಹೇಳುವುದೇ ಪಾದಯಾತ್ರೆಯ ಉದ್ದೇಶ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ತಿಳಿಸಿದರು.

ನಗರದಲ್ಲಿ ಇಂದು ನಡೆದ ಮೈಸೂರು ಪಾದಯಾತ್ರೆಯ ಪೂರ್ವ ತಯಾರಿ ಸಭೆಯ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ಅವರಿಗೆ ಸತ್ಯದ ಮನವರಿಕೆ ಮಾಡಿಕೊಡುವ ದೃಷ್ಟಿಯಿಂದ ಬೆಂಗಳೂರಿನಿಂದ ಮೈಸೂರುವರೆಗೆ ಎನ್‍ಡಿಎ ವತಿಯಿಂದ ಪಾದಯಾತ್ರೆ ಮಾಡುತ್ತೇವೆ ಎಂದು ವಿವರ ನೀಡಿದರು.

ವಿವಿಧ ಹಗರಣಗಳ ಕುರಿತು ಸರಕಾರವು ನಮಗೆ ವಿಧಾನಮಂಡಲದಲ್ಲಿ ಚರ್ಚೆ ನಡೆಸಲು ಅವಕಾಶ ಕೊಟ್ಟಿಲ್ಲ. ಸರಕಾರಕ್ಕೆ ಸತ್ಯವನ್ನು ಎದುರಿಸುವ ಧಮ್ ಇದ್ದಿದ್ದರೆ ಅವರು ವಿಧಾನಮಂಡಲದಲ್ಲಿ ಚರ್ಚೆಗೆ ಅವಕಾಶ ಕೊಡುತ್ತಿದ್ದರು ಎಂದು ವಿಶ್ಲೇಷಿಸಿದರು.

ಮೂಡ ಹಗರಣ, ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ಸೇರಿ ಎಲ್ಲ ಅವ್ಯವಹಾರಗಳನ್ನು ಜನರಿಗೆ ತಿಳಿಸುತ್ತೇವೆ ಎಂದ ಅವರು, ಭ್ರಷ್ಟಾಚಾರದ ಹಗರಣಗಳನ್ನು ಬಯಲಿಗೆಳೆಯುವ ಉದ್ದೇಶದಿಂದ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.
 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments