Webdunia - Bharat's app for daily news and videos

Install App

ಕಾಂಗ್ರೆಸ್ ಅಧಿಕಾರ, ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ?: ಸಿ.ಟಿ.ರವಿ

Krishnaveni K
ಮಂಗಳವಾರ, 1 ಜುಲೈ 2025 (16:17 IST)
ಬೆಂಗಳೂರು: ಕಾಂಗ್ರೆಸ್ ಅಧಿಕಾರ ಮತ್ತು ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು  ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ.
 
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿದ ಭೀಭತ್ಸ ಕೃತ್ಯ ನಡೆದು ತಣ್ಣಗಾಗಿತ್ತು. ಆಗ ಕೃತ್ಯ ಎಸಗಿದಾತ ಮಾನಸಿಕ ಅಸ್ವಸ್ಥ ಎಂದಿದ್ದರು. ಅದರ ನಂತರ ಭಟ್ಕಳದಲ್ಲಿ ಪ್ರಕರಣ ಆಗಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು, ಹೊಸನಗರ, ಬೆಳಗಾವಿಯಲ್ಲಿ ಇಂಥ ಘಟನೆಗಳಾಗಿವೆ. ಅಂದರೆ ಹಸುವಿನ ಕೆಚ್ಚಲು ಕತ್ತರಿಸುವ ಇಷ್ಟೊಂದು ಮಾನಸಿಕ ಅಸ್ವಸ್ಥರು ಯಾಕೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಹುಟ್ಟಿಕೊಂಡರು ಎಂದು ಕೇಳಿದರು.
 
ಹುಣ್ಣಿಮೆ ಬಂದಾಗ ಕೆಲವರಿಗೆ ಹುಚ್ಚು ಕೆದರುತ್ತಂತೆ. ಕಾಂಗ್ರೆಸ್ ಬಂದಾಗ ಈ ಹುಚ್ಚು ಹೆಚ್ಚಾಗುತ್ತದೆಯೇ? ಎಂದ ಅವರು, ಇದು ಪ್ರತ್ಯೇಕ ಘಟನೆ ಅಲ್ಲ; ಗೋವನ್ನು ದೇವರೆಂದು ಪೂಜಿಸುವ ಸಂಸ್ಕøತಿಯನ್ನು ವಿರೋಧಿಸುವ ವಿಕೃತಿ ಇರುವವರು ಇಂಥ ಕೆಲಸ ಮಾಡುತ್ತಿದ್ದಾರೆ. ಸಕಲ ಜೀವಿಗಳಿಗೂ ಲೇಸನ್ನೇ ಬಯಸು ಎಂಬ ಬಸವಣ್ಣನವರ ತತ್ವವನ್ನು ವಿರೋಧಿಸುವ ಮಾನಸಿಕತೆ ಇದರ ಹಿಂದಿದೆ ಎಂದರು.
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೃದಯಾಘಾತವಾಗುವಾಗ ಮುಖದಲ್ಲಿ ಈ ಬದಲಾವಣೆಯಾಗುತ್ತದೆ

ಬೇರೊಬ್ಬನ ಜತೆ ನಿಶ್ಚಿತಾರ್ಥ: ಆಟೊದಲ್ಲೇ ನೇಣಿಗೆ ಶರಣಾದ ಸ್ಥಿತಿಯಲ್ಲಿ ಪ್ರೇಮಿಗಳು ಪತ್ತೆ

ಹಾಸನದಲ್ಲಿ ಮತ್ತೊಂದು ಹೃದಯಾಘಾತ: ನವವಿವಾಹಿತ ಸಾವು

ತಮಿಳುನಾಡು ವ್ಯಕ್ತಿಯ ಲಾಕಪ್ ಡೆತ್ ಪ್ರಕರಣ: ಐದು ಪೊಲೀಸರು ಅರೆಸ್ಟ್‌

ಮೂರು ವರ್ಷಗಳಿಂದ ಫ್ಲ್ಯಾಟ್ ನಲ್ಲಿ ಲಾಕ್ ಮಾಡಿಕೊಂಡಿದ್ದ ವ್ಯಕ್ತಿ: video

ಮುಂದಿನ ಸುದ್ದಿ
Show comments