Publish Date: Thu, 19 Jan 2023 (07:41 IST)
Updated Date: Thu, 19 Jan 2023 (08:31 IST)
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ವತಿಯಿಂದ ಇದೇ ಜನವರಿ 21 ಮತ್ತು 22 ರಂದು ಉತ್ತರ ಕರ್ನಾಟಕ ಉತ್ಸವ 2023 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಎರಡು ದಿನ ನಡೆಯುವ ಉತ್ಸವದಲ್ಲಿ ಉತ್ತರ ಕರ್ನಾಟಕ ಸಂಸ್ಕೃತಿ, ಪರಂಪರೆ ಅನಾವರಣಗೊಳಿಸುವ ಕಾರ್ಯಕ್ರಮ ಇದಾಗಿದೆ.
ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯು ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉತ್ತರ ಕರ್ನಾಟಕ ಉತ್ಸವ 2023 ಯನ್ನು ಬೆಂಗಳೂರಿನ ಅರಮನೆ ಮೈದಾನದ ಶೀಶ್ ಮಹಾಲ್ ಪ್ಯಾಲೇಸ್ ಗೇಟ್ ನಂಬರ್ 7 ನಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದೆ.
ಉತ್ತರ ಕರ್ನಾಟಕ ಭಾಗದಿಂದ ವಿವಿಧ ಉದ್ಯೋಗ ಅರಸಿ ಬಂದು ಬೆಂಗಳೂರು ಮಹಾ ನಗರದಲ್ಲಿ ನೆಲೆಸಿ ನಮ್ಮ ಸಂಸ್ಕೃತಿ ಪರಂಪರೆಯನ್ನು ಉಳಿಸಿ ಬೆಳೆಸಿಕೊಂಡು ಹೋಗಲು ವಿವಿಧ ಬಡಾವಣೆಯಲ್ಲಿ ಸಂಘಗಳನ್ನು ಕಟ್ಟಿಕೊಂಡಿದ್ದು, ಈ ಎಲ್ಲಾ ಸಂಸ್ಥೆಗಳು ಸೇರಿ “ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ” ಯನ್ನು ಕಟ್ಟಿಕೊಂಡು ಮತ್ತಷ್ಟು ಸಂಘಟಿತರಾಗಿದ್ದೇವೆ.