ಕೊರೋನಾ ಕಾರಣದಿಂದಾಗಿ ರಾಜ್ಯದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನುವ ಕಾರಣಕ್ಕಾಗಿ ಕಳೆದ 2 ವರ್ಷಗಳಿಂದ ವಿದ್ಯುತ್ ದರ ಏರಿಕೆಯ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಮುಂದೂಡಿಕೆ ಮಾಡುತ್ತಾ ಬಂದಿತ್ತು.
ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗದಿಂದ ವಿದ್ಯುತ್ ದರ ಪರಿಷ್ಕರಣೆ ( Electricity tariff hike ) ಸಂಬಂಧ, ಮಹತ್ವದ ಸುದ್ಧಿಗೋಷ್ಠಿಯನ್ನು ನಡೆಸಲಾಯಿತು. ಈ ಸುದ್ದಿಗೋಷ್ಠಿಯಲ್ಲಿ ಪ್ರತಿ ಯೂನಿಟ್ ಗೆ 35 ಪೈಸೆ ವಿದ್ಯುತ್ ದರ ಹೆಚ್ಚಳದ ಮಹತ್ವದ ಘೋಷಣೆಯನ್ನು ಘೋಷಿಸಿದೆ. ಏಪ್ರಿಲ್ 1ರಿಂದ ಈ ದರ ಏರಿಕೆ ಜಾರಿಗೆ ಬರಲಿದೆ. ಜೆಸ್ಕಾ, ಮೆಸ್ಕಾಂ, ಬೆಸ್ಕಾಂ ವ್ಯಾಪ್ತಿಯಲ್ಲಿ ಏಪ್ರಿಲ್ 1ರಿದಂ ಜಾರಿಗೆ ಬರುವಂತೆ ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ ಮಾಡಲಾಗುತ್ತಿದೆ ಎಂಬುದಾಗಿ ಘೋಷಿಸಲಾಗಿದೆ.
ಇನ್ನೂ ವಿದ್ಯುತ್ ದರದ ಹೆಚ್ಚಳದ ಜೊತೆಗೆ ನಿಗದಿತ ಶುಲ್ಕವನ್ನು ಕೂಡ ಏರಿಕೆ ಮಾಡಲಾಗಿದೆ. ಫಿಕ್ಸಿಡ್ ಚಾರ್ಜ್ ಅನ್ನೂ ರೂ.10 ರಿಂದ 30ಕ್ಕೆ ಹೆಚ್ಚಳ ಮಾಡಲಾಗಿದೆ. ಈ ಮೂಲಕ ಕೆ ಇ ಆರ್ ಸಿ ವಿದ್ಯುತ್ ಬಳಕೆದಾರರಿಗೆ ಬಿಗ್ ಶಾಕ್ ನೀಡಿದೆ.
ಇನ್ನೂ 2009ರಿಂದ ಇಲ್ಲಿಯವರೆಗೆ ಎಷ್ಟು ವಿದ್ಯುತ್ ದರವನ್ನು ಏರಿಕೆ ಮಾಡಲಾಗಿದೆ