Webdunia - Bharat's app for daily news and videos

Install App

ಲೋಕಾಯುಕ್ತ ಇಲಾಖೆಯಲ್ಲಿ ಭ್ರಷ್ಟಾಚಾರ ಪ್ರಕರಣ: ಪ್ರತಿಕ್ರಿಯಿಸಲು ಸಿಎಂ ನಕಾರ

Webdunia
ಬುಧವಾರ, 1 ಜುಲೈ 2015 (12:04 IST)
ರಾಜ್ಯದಲ್ಲಿ ಲೋಕಾಯುಕ್ತ ಇಲಾಖೆಯಲ್ಲಿಯೇ ಭ್ರಷ್ಟಾಚಾರ ನಡೆಯುತ್ತಿದೆ ಎಂಬುದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಲು ನಿರಾಕರಿಸಿದ್ದು, ಕಾನೂನು ಸಲಹೆ ಪಡೆದು ಮುಂದಿನ ಕ್ರಮಕ್ಕೆ ಮುಂದಾಗಲಿದ್ದೇನೆ ಎಂದಿದ್ದಾರೆ. 
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಕಱಣ ಸಂಬಂಧ ನನಗೆ ಸಂಪೂರ್ಣ ಮಾಹಿತಿ ಇದೆ. ಆದರೆ ಲೋಕಾಯುಕ್ತ ಇಲಾಖೆ ಸ್ವತಂತ್ರ ಸಂಥೆಯಾದ ಕಾರಣ ಅವರ ವಿರುದ್ಧ ಸರ್ಕಾರ ಕ್ರಮ ಜರುಗಿಸಬಹುದೇ ಇಲ್ಲವೇ ಎಂಬ ಬಗ್ಗೆ ಅರಿವಿಲ್ಲ. ಆದ್ದರಿಂದ ಕಾನೂನು ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಿದ್ದೇನೆ ಎಂದು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. 
 
ಇನ್ನು ಈ ಸಂಬಂಧ ಗೃಹ ಸಚಿವ ಕೆ.ಜೆ.ಜಾರ್ಜ್ ಅವರು ಪ್ರತಿಕ್ರಿಯಿಸಿದ್ದು, ಲೋಕಾಯುಕ್ತ ಸಂಸ್ಥೆ ಒಂದು ಸ್ವತಂತ್ರ ಅಂಗ. ಆದ್ದರಿಂದ ಅಲ್ಲಿನ ಪ್ರಕರಣಗಳ ಬಗ್ಗೆ ಕ್ರಮ ಕೈಗೊಳ್ಳು ಅಧಿಕಾರ ಸರ್ಕಾರಕ್ಕಿಲ್ಲ. ಆದರೆ ಪ್ರಕರಣ ಸಂಬಂಧ ಎಸ್ಐಟಿ ರಚಿಸುವಂತೆ ಲೋಕಾಯುಕ್ತರೇ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ ಎಂದರು.  
 
ಪ್ರಕರಣದ ಹಿನ್ನೆಲೆ: ಲೋಕಾಯುಕ್ತ ಇಲಾಖೆಯ ಅಧಿಕಾರಿಗಳೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದು, ಒಂದು ಕೋಟಿ ಲಂಚ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಿದ್ದ ಬೆಂಗಳೂರು ಲೋಕಾಯುಕ್ತ ಎಸ್‌ಪಿ ಸೋನಿಯಾ ನಾರಂಗ್ ಅವರು ಈ ಪ್ರಕರಣದ ತನಿಖೆ ನಡೆಸುತ್ತಿದ್ದರು. ಆದರೆ ಅವರ ತನಿಖೆಗೆ ರಾಜ್ಯದ ಮುಖ್ಯ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರು ತಡೆ ನೀಡಿ ಪ್ರಕರಣವನ್ನು ತಮ್ಮ ಸ್ವಂತ ಅಧಿಕಾರ ಬಳಸಿ ಸಿಸಿಬಿಗೆ ವಹಿಸಿದ್ದರು. 
 
ಈ ಸಂಬಂಧ ಪ್ರತಿಕ್ರಿಯಿಸಿದ್ದ ರಾಜ್ಯದ ಉಪ ಲೋಕಾಯುಕ್ತ ಸುಭಾಷ್ ಬಿ. ಅಡಿ ಅವರು, ಭ್ರಷ್ಟಾಚಾರದ ಪ್ರಕರಣಗಳನ್ನು ತನಿಖೆ ನಡೆಸುವ ಅಧಿಕಾರ ಸಿಸಿಬಿಗೆ ಇದೆಯೇ ಎಂಬ ಬಗ್ಗೆ ನನಗೆ ತಿಳಿದಿಲ್ಲ. ಆದರೆ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸುತ್ತಿರುವಾಗಿ ಮುಖ್ಯ ಲೋಕಾಯುಕ್ತರು ತಮ್ಮ ಬಳಿ ಸಲಹೆ ಪಡೆದಿಲ್ಲ ಎಂದು ಆರೋಪಿಸಿದ್ದರು. ಇದು ಲೋಕಾಯುಕ್ತ ಇಲಾಖೆ ಹಾಗೂ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಈ ಹಿನ್ನೆಲೆಯಲ್ಲಿ ಸ್ವಯಂ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ, ವಿಶೇಷ ತನಿಖಾ ತಂಡ ರಚಿಸಿ ಪ್ರಕರಣವನ್ನು ವರ್ಗಾಯಿಸಿದೆ. ಈ ಹಿನ್ನೆಲೆಯಲ್ಲಿ ಸಚಿವರು ಹಾಗೂ ಸಿಎಂ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ. 
 
ಇನ್ನು ಪ್ರಕರಣದಲ್ಲಿ ಲೋಕಾಯುಕ್ತ ಇಲಾಖೆಯ ಜಂಟಿ ಆಯುಕ್ತ ರಿಯಾಜ್, ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಹಾಗೂ ಅವರ ಸಂಬಂಧಿ ಆಂಧ್ರ ಮೂಲದ ಕೃಷ್ಣ ರಾವ್ ಅಲಿಯಾಸ್ ನರಸಿಂಹ ರಾವ್ ಅವರು ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments