Publish Date: Mon, 30 Jul 2018 (17:20 IST)
Updated Date: Mon, 30 Jul 2018 (17:28 IST)
ಮನೆಯಲ್ಲಿದ್ದ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸ್ಟೋಟಗೊಂಡ ಪರಿಣಾಮ ಮನೆಯಲ್ಲಿದ್ದ 6 ಮಂದಿಗೆ ಸುಟ್ಟ ಗಾಯಗಳಾಗಿ ಆಸ್ಪತ್ರೆ ಸೇರಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರದಲ್ಲಿ ನಡೆದಿದೆ.
ಗಾಯಾಳುಗಳನ್ನ ವಿಜಯ್, ಬಲಭೀಮ, ಕಾಶಿನಾಥ್, ರಾಜಶೇಖರ್ , ಗಣೇಶ್, ಫಾತೀಮಾ ಎಂದು ಗುರುತಿಸಲಾಗಿದೆ. ಗಾಯಗೊಂಡವರು ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಕಾರ್ಮಿಕರಾಗಿದ್ದಾರೆ.
ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆ ಅನಿಲ ಸೋರಿಕೆಯಾಗಿದ್ದು, ಇದನ್ನ ಗಮನಿಸದೇ ಸ್ವವ್ ಹಚ್ಚಲು ಹೋದ ವೇಳೆಯಲ್ಲಿ ಸಿಲಿಂಡರ್ ಸ್ಪೋಟವಾಗಿದೆ. ಸ್ಪೋಟದ ರಭಸಕ್ಕೆ ಮನೆಯಲ್ಲಿದ್ದ ಎಲ್ಲಾ ವಸ್ತಗಳು ಚೆಲ್ಲಾಪಿಲ್ಲಿಯಾಗಿದೆ. ಮನೆಯಲ್ಲಿದ್ದ ಬಾಗಿಲು ಛಿದ್ರವಾಗಿದೆ. ಪಕ್ಕದಲ್ಲಿದ್ದ ಅಂಗಡಿ ಸಹ ಸ್ಪೋಟದಿಂದ ಹಾನಿಯಾಗಿದೆ. ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.