Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಸಿಲಿಂಡರ್ ಸ್ಪೋಟ – ಮಹಿಳೆ ಗಂಭೀರ ಗಾಯ

webdunia
hosakote , ಶನಿವಾರ, 23 ಜುಲೈ 2022 (21:26 IST)
Cylinder explosion in Bangalore - Woman seriously injured
ಸಿಲಿಂಡರ್ ಸ್ಪೋಟ ದಿಂದ ಮನೆಗೆ ಬೆಂಕಿ ಹೊತ್ತಿ ಮಹಿಳೆಗೆ ಗಂಭೀರ ಗಾಯವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮಾಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದ ತಾಯಮ್ಮ (55) ಗಂಭೀರ ಗಾಯಗೊಂಡಿರುವ ಮಹಿಳೆ ಎಂದು ಗುರುತಿಸಲಾಗಿದೆ. ಗಾಯಗೊಂಡ ತಾಯಮ್ಮನನ್ನು ಬೆಂಗಳೂರಿನ ವಾಣಿವಿಲಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿ ಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ . ಮನೆಯಲ್ಲಿದ್ದ ವಸ್ತುಗಳೆಲ್ಲ ಬೆಂಕಿಗೆ ಆಹುತಿಯಾಗಿದೆ. ಬೆಂಗಳೂರು ಗ್ರಾಮಾಂತರ ತಿರುಮಲಶೆಟ್ಟಿಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

2 ಲಕ್ಷ ರಾಷ್ಟ್ರಧ್ವಜಗಳನ್ನು ಬಿಬಿಎಂಪಿಗೆ ಹಸ್ತಾಂತರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ