ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಲಿದ್ದು, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಡಿಸೆಂಬರ್ 8 ರಿಂದ 10ರವರೆಗೆ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಡಿಸೆಂಬರ್ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಕೋಲಾರ, ರಾಮನಗರದಲ್ಲಿ ಮಳೆಯಾಗಲಿದೆ. ದಕ್ಷಿಣ ಅಂಡಮಾನ್ ಸಮುದ್ರದ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಸೋಮವಾರ ಬಂಗಾಳಕೊಲ್ಲಿ ಸಮುದ್ರದಲ್ಲಿ ವಾಯು ಭಾರ ಕುಡಿತ ನಿರ್ಮಾಣವಾಗಿದೆ, ಇದು ತಮಿಳುನಾಡು ಹಾಗೂ ಆಂಧ್ರಪ್ರದೇಶ ಮಾರ್ಗವಾಗಿ ಚಲಿಸುತ್ತದೆ. ಇದರ ಪರಿಣಾಮವಾಗಿ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ಹಲವು ಕಡೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.