Webdunia - Bharat's app for daily news and videos

Install App

ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ: ಕಾಂಗ್ರೆಸ್ ಹೈಕಮಾಂಡ್ ಚಿಂತನೆ

Webdunia
ಬುಧವಾರ, 1 ಮಾರ್ಚ್ 2017 (15:31 IST)
ಇಂಧನ ಖಾತೆ ಸಚಿವ ಹಿರಿಯ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್‌ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಕುರಿತಂತೆ ಕಾಂಗ್ರೆಸ್ ಹೈಕಮಾಂಡ್ ಗಂಭೀರ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
 
ಮುಂದಿನ ವರ್ಷದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗಾಗಿ ಇದಾಗಲೇ ಪೂರ್ವ ಸಿದ್ದತೆ ಆರಂಭಿಸಿರುವ ಕಾಂಗ್ರೆಸ್, ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಪ್ರಬಲ ಕೋಮಿನ ಮುಖಂಡನಿಗೆ ನೀಡಬೇಕು ಎನ್ನುವ ಇರಾದೆ ಹೊಂದಿದೆ.  
 
ಕಾಂಗ್ರೆಸ್ ಪಕ್ಷ ಹೈಕಮಾಂಡ್ ಯಾವುದೇ ಹುದ್ದೆ ನೀಡಿದರೂ ನಿಭಾಯಿಸುತ್ತೇನೆ. ಇಲ್ಲಿಯವರೆಗೆ ಪಕ್ಷದ ಹೈಕಮಾಂಡ್ ನೀಡಿದ ಎಲ್ಲಾ ಜವಾಬ್ದಾರಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇನೆ ಎಂದು ತಿಳಿಸಿದ್ದಾರೆ.
 
ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್, ಚುನಾವಣೆ ಚಾಣಕ್ಯ ಪ್ರಶಾಂತ್ ಕಿಶೋರ್ ಅವರಿಗೆ ಈಗಾಗಲೇ ಗಾಳ ಹಾಕಿದ್ದು, ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿ ರಾಜ್ಯದಲ್ಲಿ ಪಕ್ಷವನ್ನು ಬೇರುಮಟ್ಟದಿಂದ ಬಲಪಡಿಸಲು ಸೂಚನೆ ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments