Publish Date: Thu, 03 Aug 2017 (12:51 IST)
Updated Date: Thu, 03 Aug 2017 (12:53 IST)
ಇಂಧನ ಖಾತೆ ಸಚಿವರಾದ ಡಿ.ಕೆ.ಶಿವಕುಮಾರ್ ಅಗರ್ಭ ಶ್ರೀಮಂತರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸಚಿವ ಡಿ.ಕೆ.ಶಿವಕುಮಾರ್ ಹಲವಾರು ವ್ಯವಹಾರಗಳನ್ನು ಹೊಂದಿದ್ದಾರೆ. ವ್ಯವಹಾರಗಳಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿರಬಹುದು ಎಂದು ತಿಳಿಸಿದ್ದಾರೆ.
ಯಾವುದೇ ದಾಖಲೆಗಳಿಲ್ಲದೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸುವುದಿಲ್ಲ. ಐಟಿ ದಾಳಿ ರಾಜಕೀಯ ಪ್ರೇರಿತ ಎನ್ನುವುದು ಸತ್ಯಕ್ಕೆ ದೂರವಾದ ಸಂಗತಿ. ವಿಪಕ್ಷಗಳ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಕೇಂದ್ರ ವಿತ್ತಖಾತೆ ಸಚಿವ ಅರುಣ್ ಜೇಟ್ಲಿ ಸಂಸತ್ತಿನಲ್ಲಿ ಡಿ.ಕೆ.ಶಿವಕುಮಾರ್ ಮೇಲೆ ನಡೆದ ದಾಳಿಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಗುಜರಾತ್ ಕಾಂಗ್ರೆಸ್ ಶಾಸಕರಿಗೂ ಐಟಿ ದಾಳಿಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.