Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯರಿಗೆ ಟಾಂಗ್ ನೀಡಿದ ಸಚಿವ ಡಿ.ಕೆ.ಶಿವಕುಮಾರ್

Webdunia
ಸೋಮವಾರ, 21 ನವೆಂಬರ್ 2016 (17:42 IST)
ಸಚಿವ ರಮೇಶ್ ಜಾರಕಿಹೊಳಿ ಅವರ ಪುತ್ರನದು ಅದ್ಧೂರಿ ವಿವಾಹವೇನಲ್ಲ. ಅವರ ಮೂವರು ಸಹೋದರರು ಶಾಸಕರಾಗಿದ್ದು, ಅವರು ಉದ್ಯಮಿ ಸಹ ಆಗಿದ್ದಾರೆ. ಸಚಿವರು ತಮ್ಮ ಕನಸಿನಂತೆ ತಮ್ಮ ಪುತ್ರನ ವಿವಾಹ ಮಾಡುವುದರಲ್ಲಿ ತಪ್ಪೇನು ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯರಿಗೆ ಟಾಂಗ್ ನೀಡಿದ್ದಾರೆ. 
 
ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ ನಡೆದ ಸಚಿವ ರಮೇಶ್ ಜಾರಕಿಹೊಳಿ ಪುತ್ರನ ವಿವಾಹದಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದ್ಧೂರಿ ವಿವಾಹದಿಂದ ದೂರವಿರಿ ಎನ್ನುವುದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವೈಯಕ್ತಿಕ ವಿಚಾರವಾಗಿದ್ದು, ಅವರ ಹೇಳಿಕೆಗೂ ನನ್ನ ಮಾತಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು. 
 
ಕಪ್ಪು ಹಣ ತಡೆಗಟ್ಟಲು ಕೇಂದ್ರ ಸರಕಾರ 500, 1000 ಮುಖಬೆಲೆಯ ನೋಟ್ ಬ್ಯಾನ್ ಮಾಡಿರುವುದನ್ನು ನಾನು ಕಟುವಾಗಿ ವಿರೋಧಿಸುತ್ತೇನೆ. ಇದು ಜನಸಾಮಾನ್ಯರು ಹಾಗೂ ಬಡವರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಅಧಿವೇಶನದಲ್ಲಿ ಕೇಂದ್ರದ ನಡೆ ಕುರಿತು ಚರ್ಚೆ ನಡೆಸಲಾಗುತ್ತದೆ ಎಂದರು. 
 
ಬಿಜೆಪಿ ಶಾಸಕರು ಹಾಗೂ ಸಂಸದರು ಸಹ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರವನ್ನು ವಿರೋಧಿಸಿ ನೋಟ್ ಬ್ಯಾನ್ ಹಿಂಪಡೆಯುವಂತೆ ಮಾಡಬೇಕೆಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನಲ್ಲಿರುವ ಬಂದರು ಪಾಕಿಸ್ತಾನದಿಂದ ಉಡೀಸ್: ಅಬ್ಬಾ ಪಾಕಿಸ್ತಾನಿಯರ ಬುದ್ಧಿವಂತಿಕೆಯೇ..

India Pakistan: ಎಲ್ಲರೂ ಇಂದಿರಾ ಗಾಂಧಿಯಾಗಲು ಸಾಧ್ಯವಿಲ್ಲ, ಮೋದಿಗೆ ಟೀಕೆ

Gold Price today: ಚಿನ್ನ, ಬೆಳ್ಳಿ ದರ ಇಂದು ಎಷ್ಟಾಗಿದೆ ನೋಡಿ

India Pakistan: ಟ್ರಂಪ್ ಹೇಳಿದ್ದಕ್ಕೇ ಕದನ ವಿರಾಮಕ್ಕೆ ಒಪ್ಪಿದ್ದೇಕೆ, ಶುರುವಾಯ್ತು ಆಕ್ರೋಶ

Karnataka Weather: ಬಿಸಿಲಿನಿಂದ ತತ್ತರಿಸಿದ್ದವರಿಗೆ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments