Select Your Language

Notifications

webdunia
webdunia
webdunia
webdunia

ಡಿ.ಕೆ. ಶಿವಕುಮಾರ್‌ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

MP Basavaraja Bommai,

Sampriya

ಬೆಂಗಳೂರು , ಬುಧವಾರ, 8 ಜನವರಿ 2025 (17:04 IST)
Photo Courtesy X
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ, ಒಳಬೇಗುದಿ ಆರಂಭದಿಂದಲೂ ಇದೆ. ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಯಾವಾಗ ಒಡೆಯುತ್ತದೆ ಎನ್ನುವ ಪ್ರಶ್ನೆ ನಿರ್ಮಾಣವಾಗಿದ್ದು, ಕಾಲ ಸನ್ನಿಹಿತವಾಗಿದೆ. ಇದು ನಿರೀಕ್ಷಿತ ಬೆಳವಣಿಗೆ ಎಂದರು.

ಇದರಲ್ಲಿ ಬಹಳ ಮುಖ್ಯ ವಿಚಾರ ಡಿಕೆಶಿ ಅವರ ಸಹನೆ, ಅವರು ತಮ್ಮ ವ್ಯಕ್ತಿತ್ವಕ್ಕೆ ವಿರುದ್ಧವಾಗಿ ಬಹಳ ಸಹನೆ ಪ್ರದರ್ಶನ ಮಾಡುತ್ತಿದ್ದಾರೆ. ಅದು ಅವರ ಮುತ್ಸದ್ದಿತನವೋ? ಹೈಕಮಾಂಡ್ ಸೂಚನೆಯೋ ನೋಡಬೇಕು. ಅವರ ಸಹನೆಯ ಕಟ್ಟೆ ಯಾವಾಗ ಒಡೆಯುತ್ತದೆ ಅನ್ನುವುದು ಮುಖ್ಯವಾಗುತ್ತದೆ. ಪ್ರಕ್ರಿಯೆ ಆರಂಭವಾಗಿದ್ದು, ಕಾಲ ಯಾವಾಗ ಬರುತ್ತದೆ ಎಂದು ನೋಡಬೇಕು ಎಂದು ಹೇಳಿದರು.

ಕಾಂಗ್ರೆಸ್‌ನಲ್ಲಿ ಡಿನ್ನರ್ ಮೀಟಿಂಗ್‌ಗಳು ಅವರ ಆಂತರಿಕ ವಿಚಾರ, ಈ ಬಗ್ಗೆ ಹೆಚ್ಚು ವಿಶ್ಲೇಷಣೆ ಮಾಡುವುದಿಲ್ಲ. ಆದರೆ, ಆಡಳಿತ ಯಂತ್ರ ಕುಸಿದಿದೆ. ಇದರಿಂದ ಸಾಮಾನ್ಯ ಜನರು ತೊಂದರೆ ಅನುಭವಿಸುವಂತಾಗಿದೆ. ತಾಯಂದಿರು ಸಾಯುತ್ತಿದ್ದಾರೆ. ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸರಿಯಾಗಿ ದೊರೆಯುತ್ತಿಲ್ಲ. ಅಂಗನವಾಡಿ ಕಾರ್ಯಕರ್ತರು ಸರಿಯಾಗಿ ಗೌರವಧನ ಪಡೆಯುತ್ತಿಲ್ಲ. ನಾವು ಪ್ರತಿಪಕ್ಷವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಸತೀಶ್ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ: ಕಾಂಗ್ರೆಸ್‌ ನಾಯಕನ ಪರ ಜೆಡಿಎಸ್‌ ಶಾಸಕ ಬ್ಯಾಟಿಂಗ್‌