Publish Date: Thu, 06 Jul 2017 (16:25 IST)
Updated Date: Thu, 06 Jul 2017 (16:27 IST)
ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಬೆಂಗಳೂರಿನ ಗಂಗೇನಹಳ್ಳಿಯಲ್ಲಿ 1 ಎಕರೆ 11 ಗುಂಟೆ ಜಮೀನು ಡಿನೋಟಿಫಿಕೇಶನ್ ಮಾಡಿದ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ ಜು.24 ರವರೆಗೆ ಕ್ರಮ ಜರುಗಿಸಬಾರದು ಎಂದು ಹೈಕೋರ್ಟ್ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿದೆ.
ಗಂಗೇನಹಳ್ಳಿಯಲ್ಲಿ ಡಿನೋಟಿಫಿಕೇಶನ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ನ್ಯಾಯಾಲಯದಲ್ಲಿ ದೂರು ದಾಖಲಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.