ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ವತಿಯಿಂದ ಡಿ. 25 ರಂದು ಬೆಳಿಗ್ಗೆ 10:30 ಕ್ಕೆ ಸಿದ್ಧಾರೂಢ ಮಠದ 2 ನೇ ಮಹಾಸಭೆಯೊಂದಿಗೆ ರಾಜ್ಯ ಮಟ್ಟದ ಗ್ರಾಮೀಣ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಘ ರಾಜ್ಯಾಧ್ಯಕ್ಷ ಅಶೋಕ ಸಜ್ಜನ ಹೇಳಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾರಂಭಕ್ಕೆ ಉದ್ಘಾಟಕರಾಗಿ ಸಭಾಪತಿ ಬಸವರಾಜ ಹೊರಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ವಿಪ ಸದಸ್ಯ ಎಸ್.ವಿ. ಸಂಕನೂರ, ಕನ್ನಡ ಪರಿಷತ್ ರಾಜ್ಯಾಧ್ಯಕ್ಷ ಡಾ. ಮಹೇಶ ಜೋಶಿ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನಕುಮಾರ ಹಂಚಾಟೆ, ಕಪಾಸಾ ಜಿಲ್ಲಾ ಅಧ್ಯಕ್ಷ ಲಿಂಗರಾಜ ಅಂಗಡಿ ಭಾಗವಹಿಸುವರು ಎಂದರು.
ಸಮಾರಂಭದಲ್ಲಿ 80 ಗ್ರಾಮೀಣ ಭಾಗದ ಶಿಕ್ಷಕರಿಗೆ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸಂಘದ ವತಿಯಿಂದ 30 ಕ್ಕೂ ಹೆಚ್ಚು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಸಲ್ಲಿಸಲಾಗುವುದ ಎಂದು ತಿಳಿಸಿದರು. ಸಂಘದ ಗೌರವಾಧ್ಯಕ್ಷ ಎಲ್.ಐ. ಲಕ್ಕಮ್ಮನವರ, ಕಾರ್ಯಧ್ಯಕ್ಷ ಶಕರಪ್ಪಗೌಡ ಆರ್.ಕೆ. ಮಲ್ಲಿಕಾರ್ಜುನ ಉಪ್ಪಿನ ಶ್ರೀಕಾಂತ ರೋಣದ ಇದ್ದರು.