Publish Date: Wed, 05 Jul 2017 (13:39 IST)
Updated Date: Wed, 05 Jul 2017 (13:42 IST)
ಜಿಲ್ಲೆಯ ರಾಯಭಾಗ್ ತಾಲೂಕಿನ ಸಿದ್ದಾಪೂರ ಮರಡಿಯಲ್ಲಿ ದಲಿತ ಸಮುದಾಯದವರೇ ನಾಲ್ಕು ದಲಿತ ಕುಟುಂಬಗಳಿಗೆ ಬಹಿಷ್ಕಾರ ಹಾಕಿದ ವಿಚಿತ್ರ ಘಟನೆ ವರದಿಯಾಗಿದೆ.
ಕಳೆದ ಎರಡು ತಿಂಗಳುಗಳಿಂದ ದಲಿತ ಸಮುದಾಯದವರು ನಾಲ್ಕು ದಲಿತ ಕುಟುಂಬಗಳಿಗೆ ಬಹಿಷ್ಕಾರ ಹಾಕಿದ್ದಾರೆ.
ಸಾರ್ವಜನಿಕ ಬಳಕೆಗಾಗಿ 1 ಗುಂಟೆ ಜಾಗ ನೀಡುವಂತೆ ಕೋರಿದಾಗ, ದಲಿತ ಕುಟುಂಬದವರು ಜಾಗ ಕೊಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ದಲಿತ ಸಮುದಾಯದವರು ದಲಿತ ಕುಟುಂಬಗಳಿಗೆ ಬಹಿಷ್ಕಾರ ಹಾಕಿದ್ದಾರೆ.
ಒಂದು ವೇಳೆ ಗ್ರಾಮಸ್ಥರು ಬಹಿಷ್ಕಾರ ಹಾಕಿದ ದಲಿತ ಕುಟುಂಬದವರೊಂದಿಗೆ ಮಾತುಕತೆ ನಡೆಸಿ ನಿಯಮ ಮುರಿದಲ್ಲಿ 30 ಸಾವಿರ ರೂಪಾಯಿ ದಂಡ ತೆರಬೇಕಾಗುತ್ತದೆ ಎಂದು ದಲಿತ ಸಮುದಾಯದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.