ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ಬೆನ್ನಲ್ಲೇ ದಲಿತ ಶಾಸಕರ ರಹಸ್ಯ ಸಭೆ

Krishnaveni K
ಬುಧವಾರ, 2 ಅಕ್ಟೋಬರ್ 2024 (09:29 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದ್ದು, ತನಿಖೆ ನಡೆಸಲು ಸಿದ್ಧತೆಗಳಾಗುತ್ತಿರುವ ಬೆನ್ನಲ್ಲೇ ಇತ್ತ ಕಾಂಗ್ರೆಸ್ ನಲ್ಲಿ ದಲಿತ ಶಾಸಕರ ಬಣ ಪ್ರತ್ಯೇಕ ಸಭೆ ನಡೆಸಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾದ ಬೆನ್ನಲ್ಲೇ ಬಿಜೆಪಿ, ಜೆಡಿಎಸ್ ಸಿಎಂ ರಾಜೀನಾಮೆಗೆ ಒತ್ತಾಯಿಸಿದ್ದವು. ಇದೀಗ ಕಾಂಗ್ರೆಸ್ ನಲ್ಲೂ ಚಟುವಟಿಕೆ ಗರಿಗೆದರಿವೆ. ಸಿದ್ದರಾಮಯ್ಯ ವಿರೋಧಿ ಬಣವೊಂದು ಪಕ್ಷದೊಳಗೇ ಸೃಷ್ಟಿಯಾಗುತ್ತಿದೆ ಎನ್ನಲಾಗುತ್ತಿದೆ.

ಈ ಹಿಂದೆ ಸಿಎಂ ಬದಲಾವಣೆಗೆ ಹೇಳಿಕೆ ನೀಡುತ್ತಿದ್ದವರೇ ಈಗ ಸಿದ್ದರಾಮಯ್ಯ ನಂತರದ ಸಿಎಂ ಯಾರಾಗಬೇಕು ಎಂದು ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಇದೇ ಸಂದರ್ಭದಲ್ಲೇ ಕೆಲವು ದಲಿತ ಶಾಸಕರು ಸಭೆ ಸೇರಿದ್ದು, ಸಿದ್ದರಾಮಯ್ಯ ವಿರುದ್ಧ ಕಳಂಕ ಬಂದಿರುವ ಹಿನ್ನಲೆಯಲ್ಲಿ ಮತ್ತೆ ದಲಿತ ಸಿಎಂ ಚರ್ಚೆ ಮುನ್ನಲೆಗೆ ಬರುವ ಸಾಧ್ಯತೆಯಿದೆ.

ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ನಲ್ಲಿ ಬಹಿರಂಗ ಹೇಳಿಕೆಗಳು ಬರುತ್ತಿಲ್ಲ. ಆದರೆ ಪಕ್ಷದೊಳಗೇ ಕೆಲವರು ಮತ್ತೊಬ್ಬ ಸಿಎಂ ಆಯ್ಕೆಗೆ ಕಸರತ್ತು ನಡೆಸಿದ್ದು, ಈ ಮೂಲಕ ಸಿದ್ದರಾಮಯ್ಯ ಮೇಲೆ ಒತ್ತಡ ಹಾಕುವ ತಂತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಇಡಿ ಕೂಡಾ ಎಂಟರ್ ಆಗಿದ್ದು, ಸಿದ್ದರಾಮಯ್ಯ ವಿರುದ್ಧ ತನಿಖೆ ಯಾವ ದಿಕ್ಕಿಗೆ ಸಾಗಲಿದೆ ಎಂಬುದರ ಮೇಲೆ ಅವರ ಭವಿಷ್ಯ ನಿರ್ಧಾರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಡಿನ್ನರ್ ಮೀಟಿಂಗ್ ನಡುವೆ ಸಿಎಂ, ಡಿಸಿಎಂಗೆ ದೆಹಲಿ ಬುಲಾವ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments