Webdunia - Bharat's app for daily news and videos

Install App

ಕಿಂಗ್ ಫಿಷರ್ ಬಿಯರ್ನಲ್ಲಿ ಅಪಾಯಕಾರಿ ಅಂಶ ಪತ್ತೆ !: ಸಾಕಷ್ಟು ಮೌಲ್ಯದ ಬಿಯರ್ ಜಪ್ತಿ

Webdunia
ಗುರುವಾರ, 17 ಆಗಸ್ಟ್ 2023 (08:09 IST)
ಮೈಸೂರು : ಕಿಂಗ್ ಫಿಷರ್ ಬಿಯರ್ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿರುವ ಆತಂಕದ ವಿಚಾರ ಬಯಲಾಗಿದ್ದು, ಈ ಹಿನ್ನೆಲೆ 25 ಕೋಟಿ ರೂ. ಮೌಲ್ಯದ ಕಿಂಗ್ ಫಿಷರ್ ಬಿಯರ್ ಅನ್ನು ಮೈಸೂರಿನ ಅಬಕಾರಿ ಇಲಾಖೆ ಜಪ್ತಿ ಮಾಡಿದೆ.

ಜುಲೈ 15ರಂದು ಬಾಟಲಿಂಗ್ ಆದ ಬಿಯರ್ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿರುವುದು ದೃಢವಾಗಿದ್ದು, ಬಿಯರ್ನಲ್ಲಿರುವ ಸೆಡಿಮೆಂಟ್ ಎಂಬ ಅಂಶ ದೇಹಕ್ಕೆ ಅಪಾಯಕಾರಿ ಎಂಬುದು ಲ್ಯಾಬ್ನಲ್ಲಿ ದೃಢವಾಗಿದೆ. ವಿವಿಧ ಕೆಎಸ್ಬಿಸಿಎಲ್ ಹಾಗೂ ಆರ್ವಿಬಿ ಸನ್ನದುದಾರರಿಗೆ ಈ ಬಿಯರ್ ಅನ್ನು ಸಾಗಣೆ ಮಾಡಲಾಗಿದೆ. ಈ ಮದ್ಯವನ್ನು ಅಂಗಡಿಗಳಿಗೆ ವಿತರಣೆ ಮಾಡದಂತೆ ಸೂಚನೆ ನೀಡಲಾಗಿದ್ದು, ಬಿಯರ್ ವಿತರಣೆ ಮಾಡದಂತೆ ಸುತ್ತೋಲೆ ಹೊರಡಿಸಲಾಗಿದೆ. 

ಲ್ಯಾಬ್ ವರದಿಯಲ್ಲಿ ಅಪಾಯಕಾರಿ ಅಂಶ ದೃಢವಾದ ಹಿನ್ನೆಲೆ ಎಲ್ಲಾ ಬಿಯರ್ ಅನ್ನು ಅಬಕಾರಿ ಇಲಾಖೆ ಜಪ್ತಿ ಮಾಡಿದೆ. ನಂಜನಗೂಡಿನ ಯುನೈಟೆಡ್ ಬ್ರಿವರಿಸಿಸ್ ಕಂಪನಿ ಘಟಕದಲ್ಲಿ ತಯಾರಿಸಿದ್ದ ಬಿಯರ್ ಇದಾಗಿದ್ದು, ಈ ಬಗ್ಗೆ ಮೈಸೂರು ಗ್ರಾಮಾಂತರ ಅಬಕಾರಿ ಉಪ ಆಯುಕ್ತ ಎ.ರವಿಶಂಕರ್ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ. ಕಿಂಗ್ ಫಿಷರ್ ಸ್ಟ್ರಾಂಗ್ ಹಾಗೂ ಕಿಂಗ್ ಫಿಷರ್ ಅಲ್ಟ್ರಾ ಲ್ಯಾಗರ್ ಬಿಯರ್ನಲ್ಲಿ ಸೆಡಿಮೆಂಟ್ ಅಂಶ ಪತ್ತೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments