Publish Date: Tue, 26 Jun 2018 (22:53 IST)
Updated Date: Tue, 26 Jun 2018 (22:56 IST)
ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ತುರ್ತು ಪರಿಸ್ಥಿತಿ ಘೋಷಣೆ ಮಾಡಿರುವ ದಿನವನ್ನು ಕರಾಳ ದಿನವನ್ನಾಗಿ ಬಿಜೆಪಿ ಆಚರಣೆ ಮಾಡಿದೆ.
ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು ಕರಾಳ ದಿನವನ್ನು ಆಚರಣೆ ಮಾಡಿದರು. ದೇಶಪಾಂಡೆ ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ಕಪ್ಪು ಪಟ್ಟಿ ಕಟ್ಟಿಕೊಂಡು ಆಚರಣೆ ಮಾಡಿದರು. ಇಂದಿರಾ ಗಾಂಧಿಯವರಿಂದ ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಕಾರ್ಯಕರ್ತರು ದೂರಿದರು.
ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜೈಲು ವಾಸ ಅನುಭವಿಸಿದವರಿಗೆ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ನಾಗುಸಾ ಕಲಬುರ್ಗಿ, ರಂಗಾ ಬದ್ದಿ, ಚಂದ್ರಶೇಖರ ಗೋಕಾಕ, ಶಿವಾನಂದ ಮುತ್ತಣ್ಣವರ ಸೇರಿದಂತೆ ಪ್ರಮುಖರು ಹಾಜರಿದ್ದರು.