Publish Date: Wed, 28 Aug 2024 (12:55 IST)
Updated Date: Wed, 28 Aug 2024 (12:57 IST)
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಐಪಿ ಟ್ರೀಟ್ ಮೆಂಟ್ ನಿಡಿರುವ ಬಗ್ಗೆ ನಟ ದರ್ಶನ್ ವಿರುದ್ಧ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ದರ್ಶನ್ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಪ್ರಕರಣದ ಬಗ್ಗೆ ಎಫ್ಐಆರ್ ದಾಖಲಾಗಿದ್ದು, ಈ ಎಲ್ಲಾ ಪ್ರಕರಣದಲ್ಲಿ ದರ್ಶನ್ ಎ1 ಆರೋಪಿಯಾಗಿದ್ದಾರೆ. ಜೈಲಿನಲ್ಲಿರುವ ಅವರನ್ನು ವಿಚಾರಣೆಗೊಳಪಡಿಸಲು ಪೊಲೀಸರು ಕೋರ್ಟ್ ಒಪ್ಪಿಗೆ ಪಡೆದಿದ್ದರು. ಅದರಂತೆ ಇಂದು ಜೈಲಿಗೆ ಬಂದು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಜೈಲಿನಲ್ಲಿ ತನಗೆ ಸಿಗರೇಟು ನೀಡಿದ್ದು ಯಾರು, ಎಂಬ ಎಲ್ಲಾ ವಿಚಾರಗಳ ಬಗ್ಗೆ ದರ್ಶನ್ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಪೊಲೀಸರು ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಂತೇ ದರ್ಶನ್ ತಮಗೆ ಸಿಗರೇಟು ನೀಡಿರುವುದು ನಾಗ ಎಂದು ದರ್ಶನ್ ಬಹಿರಂಗಪಡಿಸಿದ್ದಾರೆ. ಅಲ್ಲದೆ, ಜೈಲಿನಲ್ಲಿ ತನಗೆ ರಾಜಾತಿಥ್ಯ ನೀಡಿರುವುದನ್ನು ಸ್ವತಃ ದರ್ಶನ್ ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು, ತಮ್ಮಿಂದಾಗಿ 9 ಮಂದಿ ಅಧಿಕಾರಿಗಳು ಸಸ್ಪೆಂಡ್ ಆಗಿರುವುದಕ್ಕೆ ದರ್ಶನ್ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಇಂದೇ ತಮ್ಮನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುತ್ತಿರುವ ಬಗ್ಗೆ ದರ್ಶನ್ ಆತಂಕಗೊಂಡಿದ್ದಾರೆ ಎಂದು ತಿಳಿದುಬಂದಿದೆ.