Publish Date: Tue, 18 Jun 2024 (14:38 IST)
Updated Date: Tue, 18 Jun 2024 (14:49 IST)
ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಎ 2 ಆರೋಪಿಯಾಗಿ ಪೊಲೀಸ್ ಕಸ್ಟಡಿಯಲ್ಲಿರುವ ದರ್ಶನ್ ಅವರ ಫಾರ್ಮ್ ಹೌಸ್‌ನಲ್ಲಿ ಮ್ಯಾನೇಜರ್ ಒಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ದರ್ಶನ್ ಅವರ 10 ಎಕರೆ ಪ್ರದೇಶದಲ್ಲಿದ್ದ ಫಾರ್ಮ್ ಹೌಸ್‌ನಲ್ಲಿ ಸುಮಾರು 1 ವರ್ಷ ಕಾಲ ಶ್ರೀಧರ್ ಮ್ಯಾನೇಜರ್ ಆಗಿ ಕೆಲಸ ಮಾಡಿದ್ದರು. ಇದೀಗ ಮಾನಸಿಕ ಖಿನ್ನತೆಗೆ ಒಳಗಾಗಿ ಡೆತ್‌ನೋಟ್ ಬರೆದಿಟ್ಟು ಶ್ರೀಧರ್ ಅವರು ಆನೇಕಲ್ ತಾಲೂಕಿನ ಬಗ್ಗನದೊಡ್ಡಿಯಲ್ಲಿ ಏಪ್ರಿಲ್ 16 ರಂದು ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಮಾಹಿತಿಯಿದೆ.
ಇನ್ನೂ ಸಾವಿಗೂ ಮುನ್ನಾ ವಿಡಿಯೋ ಮಾಡಿ ನನ್ನ ಸಾವಿಗೆ ನಾನೇ ಕಾರಣ ಎಂದು ಹೇಳಿದ್ದರು. ವಿಷ ಸೇವಿಸಿದ ಪರಿಣಾಮ ಫಾರ್ಮ್ ಹೌಸ್ ಪಕ್ಕದಲ್ಲಿ ರಕ್ತಕಾರಿ ಶ್ರೀಧರ್ ಸಾವನ್ನಪ್ಪಿದ್ದರು. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.