ಸಂಕಷ್ಟದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ, ಏನಿದು ಪ್ರಕರಣ ಗೊತ್ತಾ

Sampriya
ಮಂಗಳವಾರ, 18 ಜೂನ್ 2024 (17:50 IST)
photo Courtesy Instagram
ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಎ 2 ಆರೋಪಿಯಾಗಿರುವ ನಟ ದರ್ಶನ್‌ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಅದಲ್ಲದೆ ಈ ಪ್ರಕರಣದಲ್ಲಿ ದರ್ಶನ್ ಅವರ  ಪತ್ನಿ ವಿಜಯಲಕ್ಷ್ಮೀ ಅವರಿಗೂ ಸಂಕಷ್ಟ ಎದುರಾಗಿದೆ.

ಮೈಸೂರಿನಲ್ಲಿರುವ ದರ್ಶನ್ ಅವರ ಫಾರ್ಮ್‌ಹೌಸ್‌ನಲ್ಲಿ ವಿವಿಧ ತಳಿಯ ಪ್ರಾಣಿ ಪಕ್ಷಿಗಳಿವೆ.  ಇನ್ನೂ ಈ ತೋಟ ವಿಜಯಲಕ್ಷ್ಮೀ ಅವರ ಹೆಸರಲ್ಲಿದ್ದು, ಕಾನೂನು ಬಾಹಿರವಾಗಿ ಸಾಕಿದ್ದಾರೆಂಬ ಆರೋಪದಲ್ಲಿ ದರ್ಶನ್​ ಪತ್ನಿ ವಿಜಯಲಕ್ಷ್ಮೀ ಎ1 ಆರೋಪಿಯಾಗಿ, ದರ್ಶನ್​ ಎ3 ಆರೋಪಿಯಾಗಿ ಪ್ರಕರಣ ದಾಖಲಾಗಿತ್ತು.

ಕಾನೂನು ಬಾಹಿರವಾಗಿ ವಿಶಿಷ್ಟ ಜಾತಿಯ ಬಾರ್​ ಹೆಡೆಡ್​ ಗೂಸ್​ ಬಾತುಕೋಳಿಯನ್ನು ಸಾಕಿದ್ದಾರೆಂಬ ಆರೋಪದಲ್ಲಿ ಈ ಪಕ್ಷಿಯನ್ನು ವಶಕ್ಕೆ ಪಡೆದಿದ್ದ ಅರಣ್ಯ ಇಲಾಖೆ ಎಫ್​ಐಆರ್​ ದಾಖಲಿಸಿದರು.

 ದರ್ಶನ್​ ಸೇರಿದಂತೆ ಸಂಬಂಧಪಟ್ಟವರಿಗೆ ವಿಚಾರಣೆಗೆ ಬರುವಂತೆ ನೋಟಿಸ್​ ನೀಡಲಾಗಿತ್ತು. ಹಲವು ಬಾರಿ ನೋಟಿಸ್​ ನೀಡಿದರೂ ವಿಚಾರಣೆಗೆ ದರ್ಶನ್​ ಹಾಜರಾಗದಿದ್ದಕ್ಕೆ ಇದೀಗ ದರ್ಶನ್​ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಸಲು ಅರಣ್ಯ ಇಲಾಖೆ ನಿರ್ಧಾರ ಮಾಡಿದೆ ಎಂದು ತಿಳಿದುಬಂದಿದೆ. ಹೀಗಾಗಿ ದರ್ಶನ್​ ಮತ್ತು ಪತ್ನಿ ವಿಜಯಲಕ್ಷ್ಮೀಗೆ ಸಂಕಷ್ಟ ಎದುರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಸ್ಪರ್ಧಾತ್ಮಕ ಪರೀಕ್ಷೆಗೆ ಹೊರಟ್ಟಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು

ದೆಹಲಿ ವಾಯುಮಾಲಿನ್ಯ: ನಾಳೆ ಶಾಲೆಗೆ ರಜೆ ಘೋಷಣೆ, 50% ಮನೆಯಿಂದ ಕೆಲಸಕ್ಕೆ ಅನುಮತಿ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಮುಂದಿನ ಸುದ್ದಿ
Show comments