ದಸರಾ ಆನೆಗಳಿಗೂ ಕೋವಿಡ್ ಪರೀಕ್ಷೆ!

Webdunia
ಶನಿವಾರ, 14 ಆಗಸ್ಟ್ 2021 (23:38 IST)
ನಾಡಹಬ್ಬ-ಮೈಸೂರು ದಸರಾವನ್ನು ಸರಳವಾಗಿ ಆಚರಣೆ ಮಾಡುವ ಸಾಧ್ಯತೆ ಇದ್ದು, ಜಂಬೂ ಸವಾರಿಯಲ್ಲಿ ಭಾಗವಹಿಸಲು ಯಾವ ಆನೆಗಳಿಗೆ ಕೋವಿಡ್ ಪರೀಕ್ಷೆ ಮಾಡಲು ಅರಣ್ಯ ಇಲಾಖೆ ನಿರ್ಧರಿಸಿದೆ.
ಈ ಬಾರಿ ಕೇವಲ ಮಾವುತರು, ಕಾವಡಿಗಳು, ದಸರಾ ಸಂಘಟನಾ ಸಮಿತಿ ಸದಸ್ಯರು ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಮಾತ್ರವಲ್ಲದೆ ಆನೆಗಳಿಗೂ ಕೋವಿಡ್ ನೆಗಟಿವ್ ವರದಿ ಕಡ್ಡಾಯ ಮಾಡಲಾಗಿದೆ.
ಕಳೆದ ವರ್ಷ ಆನೆಗಳನ್ನು ಗಜಪಯಣದ ನಂತರ ಮೈಸೂರಿಗೆ ಕರೆತಂದಾಗ ಕೋ
ವಿಡ್ ಪರೀಕ್ಷಿಸಿಸಲಾಗಿತ್ತು. ಸಹಜವಾಗಿ ದಸರಾಗೆ 13-14 ಆನೆಗಳ ಬದಲಾಗಿ ಕೇವಲ ಐದು ಆನೆಗಳನ್ನು ಮಾತ್ರ ಕರೆ ತರಲಾಗಿತ್ತು. ಅಭಿಮನ್ಯು (ಚಿನ್ನದ ಅಂಬಾರಿ ಹೊತ್ತಿದ್ದ), ವಿಕ್ರಮ್, ಕಾವೇರಿ ಮತ್ತು ವಿಜಯ ಸೇರಿದಂತೆ ಮೂರು ಗಂಡು ಮತ್ತು ಎರಡು ಹೆಣ್ಣು ಬಂದಿದ್ದವು.
ಈ ವರ್ಷ, ಅರಣ್ಯ ಇಲಾಖೆ, ಪಶುವೈದ್ಯರು ಮತ್ತು ಮೈಸೂರು ಜಿಲ್ಲಾಡಳಿತದ ಅಧಿಕಾರಿಗಳು ಆನೆ ಶಿಬಿರಗಳಿಗೆ ಹೋಗಿ ಕೋವಿಡ್ ಪರೀಕ್ಷೆ ಮಾಡಲು ನಿರ್ಧರಿಸಿದ್ದಾರೆ.
"ಪಶುವೈದ್ಯರ ನೇತೃತ್ವದ ತಂಡವು ಮೈಸೂರು ಮತ್ತು ಕೊಡಗು ಆನೆ ಶಿಬಿರಗಳಿಗೆ ಹೋಗಿ, ಈ ಐದು ಆನೆಗಳ ಆರೋಗ್ಯವನ್ನು ಪರಿಶೀಲಿಸುತ್ತದೆ. ಒಮ್ಮೆ ಅವುಗಳ ವೈದ್ಯಕೀಯ ವರದಿ ಸಾಮಾನ್ಯವಾಗಿದ್ದರೆ ಮತ್ತು ಅವುಗಳ ಕೋವಿಡ್ ಪರೀಕ್ಷಾ ವರದಿ ನೆಗಟಿವ್ ಬಂದ ನಂತರ ದಸರಾ ಆಚರಣೆಯಲ್ಲಿ ಭಾಗವಹಿಸುವ ಆನೆಗಳ ಅಂತಿಮ ಪಟ್ಟಿಯನ್ನು ತಯಾರಿಸಲಾಗುತ್ತದೆ ಎಂದು ಹಿರಿಯ ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಎಂ ಸ್ವನಿಧಿ ಕ್ರೆಡಿಟ್ ಕಾರ್ಡ್ ಬಿಡುಗಡೆ: ಮೋದಿ ಸರ್ಕಾರದಿಂದ ಬಡವರಿಗೆ ಗಿಫ್ಟ್

Karnataka Weather: ವಾರಂತ್ಯದಲ್ಲಿ ಈ ಜಿಲ್ಲೆಗಳಿಗೆ ಮಳೆ ಸೂಚನೆ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಮುಂದಿನ ಸುದ್ದಿ
Show comments