ಬೆಂಗಳೂರು-ಏಪ್ರಿಲ್ 23 ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ.ಏಪ್ರಿಲ್ 15 ರಿಂದ 23 ರ ವರೆಗೆ ಬೆಂಗಳೂರು ಕರಗ ಮಹೋತ್ಸವ ನಡೆಯಲಿದ್ದು,ಈ ಬಾರಿಯೂ ಕರಗದ ಪೂಜಾರಿ ಎ. ಜ್ಞಾನೇಂದ್ರ ಆಗಿದ್ದು,ಹದಿಮೂರನೇ ಬಾರಿ ಬೆಂಗಳೂರು ಕರಗವನ್ನ ಎ.ಜ್ಞಾನೇಂದ್ರ ಹೊರಲಿದ್ದಾರೆ.ನಿನ್ನೆ ನಡೆದ ಸಭೆಯಲ್ಲಿ ಎ. ಜ್ಞಾನೇಂದ್ರ ಸ್ವಾಮಿ ಅವರನ್ನ ಮುಜರಾಯಿ ಇಲಾಖೆ ಮತ್ತು ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಆಯ್ಕೆ ಮಾಡಿದೆ.
ಕಳೆದ ವರ್ಷ ಕರಗ ಶಕ್ತ್ಯೋತ್ಸವ ನಡೆಯುವ ಸಂದರ್ಭದಲ್ಲಿ ಕಿಡಿಗೇಡಿಗಳು ಕರಗದ ಪೂಜಾರಿ ಎ. ಜ್ಞಾನೇಂದ್ರ ಅವರ ಮೇಲೆ ಕೆಮಿಕಲ್ ಎರಚಿದ್ರು.ಕರಗಕ್ಕೆ ಅಡ್ಡಿಪಡಿಸಲು ಮುಂದಾಗಿದ್ರು, ಆದ್ರು ಕರಗದ ಪೂಜಾರಿ ಎ.ಜ್ಞಾನೇಂದ್ರ ಯಶಸ್ವಿಯಾಗಿ ದ್ರೌಪದಿದೇವಿ ಕರಗವನ್ನು ರಾಜಬೀದಿ ಉತ್ಸವ ಮುಗಿಸಿ ಧರ್ಮರಾಯ ಸ್ವಾಮಿ ದೇವಾಲಯ ತಲುಪಿಸಿದ್ದರು.