Webdunia - Bharat's app for daily news and videos

Install App

ಅಸೆಂಬ್ಲಿ ಚುನಾವಣೆಗೆ ಇಂದು ದಿನಾಂಕ ಫಿಕ್ಸ್‌

Webdunia
ಶುಕ್ರವಾರ, 14 ಅಕ್ಟೋಬರ್ 2022 (17:00 IST)
ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ ಮತ್ತು ಚುನಾವಣಾ ಕಾರ್ಯತಂತ್ರದ ದೃಷ್ಟಿಯಿಂದ ಮಹತ್ವ ಪಡೆದಿರುವ ಹಿಮಾಚಲ ಪ್ರದೇಶ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ಇಂದು ದಿನಾಂಕ ಘೋಷಿಸಲಿದೆ. ಗುಜರಾತ್​ನಲ್ಲಿ ಆಮ್ ಆದ್ಮಿ ಪಕ್ಷವು ಚಟುವಟಿಕೆ ಚುರುಕುಗೊಳಿಸಿದ್ದು, ಪಂಜಾಬ್ ಮಾದರಿಯ ಫಲಿತಾಂಶ ಮರುಕಳಿಸುವ ವಿಶ್ವಾಸದಲ್ಲಿದೆ. ಲೋಕಸಭೆ ಚುನಾವಣೆ ಮತ್ತು ದೇಶದ ವಿವಿಧ ರಾಜ್ಯಗಳಲ್ಲಿ ಶೀಘ್ರದಲ್ಲಿಯೇ ನಡೆಯುವ ಚುನಾವಣೆಗಳ ಮೇಲೆ ಈ ಎರಡೂ ರಾಜ್ಯಗಳ ಚುನಾವಣಾ ಫಲಿತಾಂಶ ಪರಿಣಾಮ ಬೀರುವ ನಿರೀಕ್ಷೆಯಿರುವುದರಿಂದ ಎಲ್ಲ ರಾಜಕೀಯ ಪಕ್ಷಗಳೂ ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿವೆ. ಗುಜರಾತ್​ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಬಿಜೆಪಿ ಹಲವು ಸಮಾವೇಶ ಮತ್ತು ಜನಸಂಪರ್ಕ ಕಾರ್ಯಕ್ರಮಗಳನ್ನು ನಡೆಸಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಬಹಿರಂಗ ಸಭೆಗಳಲ್ಲಿ ಮಾತನಾಡಿದ್ದರು. ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಹಲವು ಬಾರಿ ಗುಜರಾತ್​ಗೆ ಭೇಟಿ ನೀಡಿದ್ದು ಸಂಘಟನೆ ಚುರುಕುಗೊಳಿಸಲು ಯತ್ನಿಸಿದ್ದಾರೆ. ಗುಜರಾತ್​ನಲ್ಲಿ ಆಪ್ ಮತ್ತು ಬಿಜೆಪಿ ನಡುವೆ ಹಣಾಹಣಿ ನಡೆಯುವ ನಿರೀಕ್ಷೆಯಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments