Publish Date: Fri, 26 Aug 2022 (10:22 IST)
Updated Date: Fri, 26 Aug 2022 (10:24 IST)
ಮೈಸೂರು : ಮಹಾನಗರಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.
ಸೆಪ್ಟಂಬರ್ ಸೆ.6ರಂದು ಮೈಸೂರು ಮಹಾನಗರಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ ಎಂದು ಪ್ರಾದೇಶಿಕ ಆಯುಕ್ತರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಮೇಯರ್ ಚುನಾವಣೆ ಜೊತೆಗೆ ನಾಲ್ಕು ಸ್ಥಾಯಿ ಸಮಿತಿಗಳಿಗೂ ಅಂದೇ ಚುನಾವಣೆ ನಡೆಯಲಿದೆ. ಕಳೆದ 6 ತಿಂಗಳಿಂದ ಬಾಕಿ ಉಳಿದಿದ್ದ ಮೇಯರ್, ಉಪಮೇಯರ್ ಚುನಾವಣೆ ಇದೀಗ ಸರ್ಕಾರಿಂದ ಮೀಸಲಾತಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರಿಂದ ಚುನಾವಣೆ ದಿನಾಂಕ ಘೋಷಣೆಯಾಗಿದೆ.