Select Your Language

Notifications

webdunia
webdunia
webdunia
webdunia

ಕೌಟುಂಬಿಕ ಕಲಹದಿಂದ ಬೇಸತ್ತು ಲಾಡ್ಜ್‌ನಲ್ಲೇ ಸಾವಿಗೆ ಶರಣಾದ ದಾವಣಗೆರೆಯ ಸಬ್‌ ಇನ್‌ಸ್ಪೆಕ್ಟರ್‌

Police Sub-Inspector Nagarajappa, Davangere Nagar Block, Karnataka Police

Sampriya

ತುಮಕೂರು , ಭಾನುವಾರ, 6 ಜುಲೈ 2025 (13:41 IST)
Photo Credit X
ತುಮಕೂರು: ಪೊಲೀಸ್ ಸಬ್ ಇನ್ಸ್ ಪೆಕ್ಟರ್‌ರೊಬ್ಬರು ಕೌಟುಂಬಿಕ ಕಹಲದಿಂದ ಬೇಸತ್ತು ಲಾಡ್ಜ್‌ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. 

ದಾವಣಗೆರೆ ನಗರದ ಬಡಾವಣೆ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನಾಗರಾಜಪ್ಪ ಆತ್ಮಹತ್ಯೆ ಮಾಡಿಕೊಂಡವರು. ಲಾಡ್ಜ್‌ನಲ್ಲಿ ದುರ್ವಾಸನೆ ಬಂದಾಗ, ಸಿಬ್ಬಂದಿ ಮಾಲೀಕರಿಗೆ ಮಾಹಿತಿ ನೀಡಿದ್ದರು. ಬಾಗಿಲು ತೆರೆದು ನೋಡಿದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ನಾಗರಾಜಪ್ಪ ಆತ್ಮಹತ್ಯೆ ಮಾಡಿಕೊಂಡ ಕೊಠಡಿಯಲ್ಲಿ ಡೆತ್ ನೋಟ್ ಪತ್ತೆಯಾಗಿದೆ. 2 ಪುಟಗಳ ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ನಾನೇ ಕಾರಣ. ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ. ಅಲ್ಲದೇ ಹೋಟೆಲ್ ಮಾಲೀಕರಿಗೂ ಡೆತ್‍ನೋಟ್‍ನಲ್ಲಿ ಕ್ಷಮೆ ಕೇಳಿದ್ದಾರೆ.

ಜು.1ರಂದು ದ್ವಾರಕಾ ಹೋಟೆಲ್‍ನ 4ನೇ ಮಹಡಿಯಲ್ಲಿ ರೂಮ್ ಬಾಡಿಗೆ ಪಡೆದಿದ್ದ ನಾಗರಾಜಪ್ಪ, ರೂಮ್‍ಗೆ ತೆರಳಿದ್ದಾಗಿನಿಂದ ಅವರು ಹೊರಗೆ ಬಂದಿರಲಿಲ್ಲ. ಲಾಡ್ಜ್ ಸಿಬ್ಬಂದಿ ಕರೆ ಮಾಡಿದ್ರೂ ಅವರು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

ನಾಲ್ಕು ದಿನಗಳ ಹಿಂದೆ ಅವರು ನೇಣಿಗೆ ಶರಣಾಗಿದ್ದು, ಮೃತದೇಹ ಕೊಳೆತು ಹುಳಗಳಾಗಿದ್ದವು ಎಂದು ತಿಳಿದು ಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ತುಮಕೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 



Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಬದಲಾವಣೆ ಕೂಗಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಹೊಸ ಜವಾಬ್ದಾರಿ: ಏನಿದು ಲೆಕ್ಕಾಚಾರ