ದಾವಣಗೆರೆ: ಗಣೇಶಮೂರ್ತಿ ಬಳಿ ವಿವಾದ ಸೃಷ್ಟಿಸಿದ ಫ್ಲೆಕ್ಸ್‌ನಲ್ಲಿ ಏನಿತ್ತು

Sampriya
ಶುಕ್ರವಾರ, 29 ಆಗಸ್ಟ್ 2025 (14:39 IST)
Photo Credit X
ದಾವಣಗೆರೆ: ಇಲ್ಲಿನ ಮಟ್ಟಿಕಲ್‌ನ ಗಣೇಶಮೂರ್ತಿ ಪ್ರತಿಷ್ಠಾಪನಾ ಸ್ಥಳದಲ್ಲಿ ಅಳವಡಿಸಿದ್ದ ವಿವಾದ ಸೃಷ್ಟಿಸಿದ ಫ್ಲೆಕ್ಸ್‌ ಅನ್ನು ಪೊಲೀಸರು ತೆರವು ಮಾಡಿದ್ದಾರೆ. 

ಗುರುವಾರ ರಾತ್ರಿ ನಿರ್ಮಾಣವಾಗಿದ್ದ ಬಿಗುವಿನ ವಾತಾವರಣ ಫ್ಲೆಕ್ಸ್‌ ಅನ್ನು ತೆರವುಗೊಳಿಸುವ ಮೂಲಕ ತಿಳಿಕೊಂಡಿದೆ.

ಶಿವಾಜಿ ಮಹಾರಾಜ್ ಹಾಗೂ ಅಫ್ಜಲ್ ಖಾನ್‌ ನಡುವಿನ ಯುದ್ಧದ ಸನ್ನಿವೇಶದ ಆಕ್ಷೇಪಾರ್ಹ ಫ್ಲೆಕ್ಸ್‌ ತೆರವುಗೊಂಡಿದ್ದು, ಈ ಸ್ಥಳದಲ್ಲಿ ಶಿವಾಜಿಯ ಬೃಹತ್ ಚಿತ್ರವನ್ನು ಅಳವಡಿಸಲಾಗಿದೆ.

ನಗರದ ವೀರ ಸಾವರ್ಕರ್ ಯುವಕರ ಸಂಘ ಮಟ್ಟಿಕಲ್‌ನಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶ ಮೂರ್ತಿಯ ಪೆಂಡಾಲ್ ಬಳಿ ಇತಿಹಾಸದ ಮಹನೀಯರ ಬೃಹತ್ ಗಾತ್ರದ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು. 
ಶಿವಾಜಿ ಹಾಗೂ ಅಫ್ಜಲ್ ಖಾನ್‌ ನಡುವಿನ ಯುದ್ಧದ ಸನ್ನಿವೇಶದ ಫ್ಲೆಕ್ಸ್‌ ಭಾರೀ ವಿವಾದವನ್ನು ಸೃಷ್ಟಿಸಿತು. ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಪೊಲೀಸರು ತೆರವು ಮಾಡಿದ್ದಾರೆ.

ರಾತ್ರಿ ಸ್ಥಳಕ್ಕೆ ಧಾವಿಸಿದ ಪೊಲೀಸರು, ಆಕ್ಷೇಪಾರ್ಹ‌ ಚಿತ್ರ ತೆರವುಗೊಳಿಸುವಂತೆ ಗಣೇಶ ಉತ್ಸವ ಸಮಿತಿಗೆ ಸೂಚಿಸಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ನೂರಾರು ಯುವಕರು, ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದರು. ಇದರಿಂದ ಗುರುವಾರ ಮಧ್ಯರಾತ್ರಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸಂಘಪರಿವಾರ ಸಂಘಟನೆಯ ಮುಖಂಡರೊಂದಿಗೆ ಸುಧೀರ್ಘ ಚರ್ಚೆ ನಡೆಸಿದ ಪೊಲೀಸರು ವಾತಾವರಣ ತಿಳಿಸಿದರು.

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments