Publish Date: Mon, 06 Nov 2017 (16:57 IST)
Updated Date: Mon, 06 Nov 2017 (17:01 IST)
ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದ ಮೂಲಕ ರಾಜ್ಯದ ಹಗಲು ದರೋಡೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಹಾಸನದ ಹಳೇಬೀಡಿನಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರಕಾರ ಹಗಲುದರೋಡೆಗಿಳಿದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ದಿವಾಳಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ತುಘಲಕ್ ದರ್ಬಾರ್‌ನಿಂದಾಗಿ ಸರಕಾರ ಬೆಂಗಳೂರಿನ ಕಾರ್ನರ್‌ಸೈಟ್‌ಗಳನ್ನು ಅಡವಿಟ್ಟು ಸಾಲ ಮಾಡುವ ಮಟ್ಟಕ್ಕೆ ಬಂದು ನಿಂತಿದೆ. ಇದೊಂದು ದೇಶದಲ್ಲಿಯೇ ಭ್ರಷ್ಟ ಸರಕಾರವಾಗಿದೆ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಸರಕಾರದ ಅಡಳಿತದಿಂದ ಜನತೆ ಬೇಸತ್ತಿದ್ದು, ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.