Select Your Language

Notifications

webdunia
webdunia
webdunia
webdunia

ಇಂದಿನಿಂದ 3 ದಿನ ರಾಜ್ಯಾದ್ಯಂತ ಚಳಿ ಗಾಳಿ; ಕೆಲವು ರಾಜ್ಯಗಳಲ್ಲಿ ಮಳೆ ಸಾಧ್ಯತೆ

ಇಂದಿನಿಂದ 3 ದಿನ ರಾಜ್ಯಾದ್ಯಂತ ಚಳಿ ಗಾಳಿ; ಕೆಲವು ರಾಜ್ಯಗಳಲ್ಲಿ ಮಳೆ ಸಾಧ್ಯತೆ
bangalore , ಶುಕ್ರವಾರ, 24 ಡಿಸೆಂಬರ್ 2021 (17:55 IST)
ಇಂದಿನಿಂದ ಮೂರು ದಿನಗಳ ಕಾಲ ರಾಜ್ಯಾದ್ಯಂತ ಚಳಿ ಗಾಳಿ ಹೆಚ್ಚಾಗಲಿದೆ ಎನ್ನಲಾಗಿದೆ. ಡಿಸೆಂಬರ್ 26 ಮತ್ತು 27ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತು ಡಿಸೆಂಬರ್ 27ರಂದು ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ ಅಥವಾ ಹಿಮಪಾತವಾಗಲಿದೆ.
ಬೆಂಗಳೂರು:- ಕರ್ನಾಟಕದಲ್ಲಿ ಮಳೆಗಾಲ ಮುಗಿದು ಚಳಿಗಾಲ ತೀವ್ರವಾಗಿದೆ.
ಉತ್ತರ ಭಾರತದಿಂದ ದಕ್ಷಿಣ ಭಾರತದತ್ತ ಚಳಿಗಾಳಿ ಬೀಸತೊಡಗಿದ್ದು, ಬೆಂಗಳೂರು, ಮಲೆನಾಡು, ಕರಾವಳಿ ಹಾಗೂ ಉತ್ತರ ಕರ್ನಾಟಕದಲ್ಲೂ ದಾಖಲೆಯ ಚಳಿ ಉಂಟಾಗಿದೆ. ಬೀದರ್ ಜಿಲ್ಲೆಯಲ್ಲಿ ಡಿಸೆಂಬರ್ ತಿಂಗಳ ಕನಿಷ್ಠ ತಾಪಮಾನ ದಾಖಲೆಯ ಮಟ್ಟಕ್ಕೆ ಕುಸಿದಿದೆ. ಇಂದಿನಿಂದ ಮೂರು ದಿನಗಳ ಕಾಲ ರಾಜ್ಯಾದ್ಯಂತ ಚಳಿ ಗಾಳಿ ಹೆಚ್ಚಾಗಲಿದೆ ಎನ್ನಲಾಗಿದೆ. ಬೀದರ್​ನಲ್ಲಿ ಕನಿಷ್ಠ ತಾಪಮಾನ 6.7 ಡಿಗ್ರಿ ಸೆಲ್ಷಿಯಸ್​ಗೆ ಇಳಿದಿತ್ತು. ಬೆಂಗಳೂರಿನಲ್ಲೂ ಚಳಿ ತೀವ್ರವಾಗುತ್ತಿದೆ.
IMD ಹವಾಮಾನದ ಪ್ರಕಾರ, ಡಿಸೆಂಬರ್ 26ರಿಂದ ಡಿಸೆಂಬರ್ 28ರವರೆಗೆ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ವ್ಯಾಪಕವಾದ ಮಳೆ ಅಥವಾ ಹಿಮಪಾತವಾಗುವ ಸಾಧ್ಯತೆಯಿದೆ. ಡಿಸೆಂಬರ್ 26 ಮತ್ತು 27ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತು ಡಿಸೆಂಬರ್ 27ರಂದು ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ ಅಥವಾ ಹಿಮಪಾತವಾಗಲಿದೆ. ಹವಾಮಾನ ಮುನ್ಸೂಚನಾ ಸಂಸ್ಥೆಯು ಡಿಸೆಂಬರ್ 26 ಮತ್ತು ಡಿಸೆಂಬರ್ 27ರಂದು ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಚದುರಿದ ಮಳೆಯಾಗುವ ಮುನ್ಸೂಚನೆ ನೀಡಿದೆ.
ಡಿಸೆಂಬರ್ 27 ಮತ್ತು ಡಿಸೆಂಬರ್ 29ರ ನಡುವೆ ಮಧ್ಯಪ್ರದೇಶ, ಛತ್ತೀಸ್‌ಗಢ, ವಿದರ್ಭ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಇದಲ್ಲದೆ, ಜಮ್ಮು, ಹಿಮಾಚಲ ಪ್ರದೇಶ, ಪಂಜಾಬ್‌ನ ಉತ್ತರ ಭಾಗಗಳು ಮತ್ತು ಹರಿಯಾಣದ ಮೇಲೆ 26ರಂದು ಮತ್ತು ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ಡಿಸೆಂಬರ್ 26 ಮತ್ತು ಡಿಸೆಂಬರ್ 27ರಂದು ಆಲಿಕಲ್ಲು ಮಳೆ ಬೀಳಬಹುದು.
ಇಂದಿನಿಂದ 2 ದಿನ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಳೆಯಾಗಲಿದೆ. ಇಂದು ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್ ಮತ್ತು ಮಣಿಪುರದಲ್ಲಿ ಮಳೆಯಾಗಲಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಮಳೆ ಮತ್ತು ಹಿಮಪಾತದ ಸಾಧ್ಯತೆಯಿದೆ. ಇಂದಿನಿಂದ ಡಿಸೆಂಬರ್ 29ರವರೆಗೆ ಪಶ್ಚಿಮ ಹಿಮಾಲಯದ ಪ್ರದೇಶದಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ. ಡಿಸೆಂಬರ್ 27ರಂದು ಕಾಶ್ಮೀರ ಪ್ರದೇಶ ಮತ್ತು ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ.
ಡಿಸೆಂಬರ್ 26ರಿಂದ 29ರವರೆಗೆ ವಾಯುವ್ಯ ಭಾರತದ ಪಕ್ಕದ ಬಯಲು ಪ್ರದೇಶಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ ವಾಯುವ್ಯ ಮತ್ತು ಮಧ್ಯ ಭಾರತದ ಹೆಚ್ಚಿನ ಭಾಗಗಳಲ್ಲಿ ಶೀತ ಅಲೆ ಉಂಟಾಗಲಿದೆ. ಇಂದು ಉತ್ತರಾಖಂಡ, ಉತ್ತರ ಪ್ರದೇಶ, ಪೂರ್ವ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಒಡಿಶಾದಲ್ಲಿ ಮತ್ತು ಪಂಜಾಬ್, ಹರಿಯಾಣ, ಪೂರ್ವ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಸೌರಾಷ್ಟ್ರ ಮತ್ತು ಕಚ್, ತೆಲಂಗಾಣ, ಬಿಹಾರ, ಜಾರ್ಖಂಡ್‌ನಲ್ಲಿ ಮಳೆಯಾಗಲಿದೆ.
ಇಂದಿನಿಂದ ಡಿಸೆಂಬರ್ 25ರವರೆಗೆ ಪಶ್ಚಿಮ ಹಿಮಾಲಯನ್ ಪ್ರದೇಶದಲ್ಲಿ ಲಘುವಾಗಿ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ. ಇಂದಿನಿಂದ ಡಿಸೆಂಬರ್ 25ರವರೆಗೆ ಪಂಜಾಬ್ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿ ದಟ್ಟವಾದ ಮಂಜು ಇರುತ್ತದೆ. ಇಂದು ಪಂಜಾಬ್‌ನಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೆಟ್ರೋ ಪಿಕ್ನಿಕ್ ಹೊಸ ಟಿಕೆಟ್