ಮುಂಗಾರು ಹಾಗೂ ಹಿಂಗಾರು ಹಂಗಾಮಿನ ಮಳೆ ಕೊರತೆಯಿಂದಾಗಿ ತಾಲೂಕಿನಲ್ಲಿ ಕೇವಲ ಪ್ರತಿಶತ 28 ರಷ್ಟು ಬಿತ್ತನೆಯಾಗಿದೆ. ಬಿತ್ತನೆ ಹಾಗೂ ಮಳೆಯ ಅಭಾವವನ್ನಾಧರಿಸಿ ಬರ ಪೀಡಿತ ತಾಲೂಕು ಘೋಷಿಸಲು ಸರಕಾರಕ್ಕೆ ಮನವಿ ಸಲ್ಲಿಸುವಂತೆ ಡಿಸಿ ಸೂಚನೆ ನೀಡಿದ್ದಾರೆ.
ಕಲಬುರಗಿ ಜಿಲ್ಲೆಯ ಆಳಂದ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.
ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬರ ಪರಿಸ್ಥಿತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಸೂಚನೆಗಳನ್ನು ನೀಡಿ, ಮುಂಗಾರು ಹಂಗಾಮಿನ ಬೆಳೆಗಳ ಜಂಟಿ ಸಮೀಕ್ಷೆ ಕೈಗೊಂಡು ಸರ್ಕಾರಕ್ಕೆ ಬೆಳೆ ಹಾನಿಯ ವರದಿ ಈಗಾಗಲೇ ಸಲ್ಲಿಸಲಾಗಿದೆ. ಕಳೆದ ಒಂದು ತಿಂಗಳಿಂದ ಜಿಲ್ಲೆಯಲ್ಲಿ ಮಳೆ ಆಗದ ಕಾರಣ ಬೆಳೆ ಹಾನಿ ಪ್ರದೇಶ ಹಾಗೂ ಹಾನಿಯ ಪ್ರಮಾಣ ಹೆಚ್ಚಾಗಿದೆ. ಕೂಡಲೇ ಅಧಿಕಾರಿಗಳು ಜಂಟಿ ಸಮೀಕ್ಷೆ ಕೈಗೊಂಡು ಬೆಳೆ ಹಾನಿ ಕುರಿತು ಪರಿಷ್ಕೃತ ವರದಿಯೊಂದನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದರು.