ಯೋಧನ ಕುಟುಂಬಸ್ಥರಿಗೆ ಧೈರ್ಯ ತುಂಬಿದ ಡಿಸಿ

Webdunia
ಶುಕ್ರವಾರ, 15 ಫೆಬ್ರವರಿ 2019 (15:49 IST)
ವೀರಸ್ವರ್ಗವನ್ನು ಅಪ್ಪಿದ ಸಕ್ಕರೆ ನಾಡಿನ ಮೃತ ಯೋಧನ ಕುಟುಂಬಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿ ಸಾಂತ್ವನ ಹೇಳಿದರು.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ ದೊಡ್ಡಿ ಸಮೀಪದ ಗುಡಿಕೆರೆ ಕಾಲೋನಿಯ ಯೋಧ ಗುರು ಎಚ್ (33) ಹುತಾತ್ಮರಾಗಿದ್ದು, ಜಿಲ್ಲಾಧಿಕಾರಿ ಎನ್. ಮಂಜುಶ್ರೀ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರು ಕುಟುಂಬಕ್ಕೆ ಜಿಲ್ಲಾಡಳಿತದಿಂದ ಯಾವುದೇ ರೀತಿಯ ನೆರವಿಗೆ ಸಿದ್ಧವಿದೆ. ಕುಟುಂಬಸ್ಥರು ಧೈರ್ಯವಾಗಿರಬೇಕು ಹಾಗೆಯೇ ಹೆಚ್ಚಿನ ಆತಂಕಕ್ಕೆ ಒಳಗಾಗಬಾರದು ಎಂದು ಅವರು ಮನವಿ ಮಾಡಿಕೊಂಡರು.

ಮೃತರ ಶರೀರ ಇಂದು ಅಥವಾ ನಾಳೆ ಸ್ವ-ಗ್ರಾಮಕ್ಕೆ ವಾಪಸ್ಸಾಗಲಿದೆ. ಆದರೆ ಇನ್ನೂ ನಾವು ಅಧಿಕೃತ ಮಾಹಿತಿಗಾಗಿ ಕಾಯುತ್ತಿದ್ದೇವೆ. ಅದು ಬಂದ ನಂತರ ಇದೇ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸುವುದಾಗಿ ಅವರು ಹೇಳಿದರು.

ಈಗಾಗಲೇ ನಾನು ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಅಂತ್ಯಕ್ರಿಯೆಗಾಗಿ ತಾಲೂಕು ಆಡಳಿತದಿಂದ ಎರಡು ಜಾಗವನ್ನು ಗುರುತಿಸಿದ್ದೇವೆ. ಎರಡರಲ್ಲಿ ಯಾವುದು ಸೂಕ್ತ ಎನ್ನುವುದನ್ನು ನೋಡಿ ಅಂತಿಮ ಮಾಡುತ್ತೇವೆ.

ಗುರು ಹುತಾತ್ಮರಾದ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ಆದ್ರೆ ದೆಹಲಿಯಲ್ಲಿರುವ ಸಿಆರ್ ಪಿ ಎಫ್ ಕಚೇರಿಗೆ ಕರೆ ಮಾಡಿ ಕೇಳಿದಾಗ ಸಾವಾಗಿರುವುದು ನಿಶ್ಚಿತ ಎಂಬ ಮಾಹಿತಿ ಲಭಿಸಿದೆ ಎಂದು ಅವರು ತಿಳಿಸಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments