Publish Date: Thu, 25 Aug 2016 (16:26 IST)
Updated Date: Thu, 25 Aug 2016 (16:40 IST)
ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾಗೂ ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಮರಿಗೌಡಗೆ ಜಾಮೀನು ಮಂಜೂರಾಗಿದೆ.
ಮೈಸೂರು ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಆರೋಪಿ ಕೆ.ಮರಿಗೌಡನಿಗೆ ಜಾಮೀನು ಮಂಜೂರು ಮಾಡಿದೆ.
ತಹಶೀಲ್ದಾರ್ ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಸಿಎಂ ಆಪ್ತ ಕೆ.ಮರಿಗೌಡ, ಮೈಸೂರು ಜಿಲ್ಲಾಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ್ದರು. ಈ ಕುರಿತು ಜಿಲ್ಲಾಧಿಕಾರಿಯವರು ನಜರ್‌ಬಾದ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ತಲೆ ಮರೆಸಿಕೊಂಡಿದ್ದ ಕೆ.ಮರಿಗೌಡ, ಅಗಸ್ಟ್ 3 ರಂದು ನಜರ್‌ಬಾದ್ ಪೊಲೀಸ್ ಠಾಣೆಗೆ ಶರಣಾಗಿದ್ದರು. ಕಳೆದ 22 ದಿನಗಳಿಂದ ಜೈಲುವಾಸ ಅನುಭವಿಸಿದ ಬಳಿಕ ಇಂದು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ