Select Your Language

Notifications

webdunia
webdunia
webdunia
webdunia

SSLC ಪರೀಕ್ಷೆ ಬರೆಯುವರಿಗೆ ಕೊರೊನಾ ಇಲ್ಲ ಎಂದವರು ಯಾರು?

SSLC ಪರೀಕ್ಷೆ ಬರೆಯುವರಿಗೆ ಕೊರೊನಾ ಇಲ್ಲ ಎಂದವರು ಯಾರು?
ತುಮಕೂರು , ಬುಧವಾರ, 24 ಜೂನ್ 2020 (19:53 IST)
ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುವ ಮಕ್ಕಳಲ್ಲಿ ಯಾವುದೇ ಕೋವಿಡ್-19 ಪಾಸಿಟಿವ್ ಪ್ರಕರಣ ಇಲ್ಲ.

ಜೂನ್ 25ರಿಂದ ಆರಂಭವಾಗುತ್ತಿರುವ ಹತ್ತನೇ ತರಗತಿ ಪರೀಕ್ಷೆಯನ್ನು ತುಮಕೂರು ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ.

ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ಮಕ್ಕಳಲ್ಲಿ ಯಾವುದೇ ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ.

ಒಂದು ವೇಳೆ ಪಾಸಿಟಿವ್ ಪ್ರಕರಣ ಕಂಡು ಬಂದರೆ, ಪಾಸಿಟಿವ್ ಅಥವಾ ಪ್ರಾಥಮಿಕ ಸಂಪರ್ಕದಲ್ಲಿದ್ದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯಲ್ಲಿ ಪ್ರೆಶ್ ಎಂದು ಪರಿಗಣಿಸಿ ಪರೀಕ್ಷೆ ಬರೆಸುವ ವ್ಯವಸ್ಥೆಯನ್ನು ಮಾಡಿಕೊಂಡಿದ್ದೇವೆ ಎಂದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಡೀಸೆಲ್ ಬೆಲೆ ಭಾರೀ ಏರಿಕೆ