ಬಿಯಾಂಡ್‌ ಬೆಂಗಳೂರು ಮೂಲಕ ಹುಬ್ಬಳ್ಳಿಯಲ್ಲಿ ಹೆಚ್ಚು ಕೈಗಾರಿಕೆಗಳ ಸ್ಥಾಪನೆ: ಡಿಸಿಎಂ

Webdunia
ಸೋಮವಾರ, 12 ಜುಲೈ 2021 (19:42 IST)
ಹುಬ್ಬಳ್ಳಿ: ಆವಿಷ್ಕಾರ ಮತ್ತು ತಂತ್ರಜ್ಞಾನ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಈಗಾಗಲೇ ಹುಬ್ಬಳ್ಳಿಯಲ್ಲಿ ಕೈಗಾರಿಕಾಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ ಹಾಗೂ ಬಿಯಾಂಡ್‌ ಬೆಂಗಳೂರು ಕಾರ್ಯಕ್ರಮದ ಮೂಲಕ ಇನ್ನಷ್ಟು ಕೈಗಾರಿಕೆಗಳ ಸ್ಥಾಪನೆಗೆ ಪೂರಕವಾಗಿ ಅವಕಾಶ ನೀಡಲಾಗಿದೆ ಎಂದು ವಿಜ್ಞಾನ-ತಂತ್ರಜ್ಞಾನ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು. 
 
ಹುಬ್ಬಳ್ಳಿಯಲ್ಲಿ ಸೋಮವಾರ ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈಗಾಗಲೇ ಸರಕಾರ ಎಲೆಕ್ಟ್ರಾನಿಕ್ಸ್ ಸಿಸ್ಟಮ್ ವಿನ್ಯಾಸ ಮತ್ತು ಉತ್ಪಾದನೆ (esdm) ನೀತಿಯನ್ನು ಜಾರಿಗೆ ತಂದಿದ್ದು ಅದರ ಮೂಲಕ ಹಲವಾರು ಕಂಪನಿಗಳು ಹುಬ್ಬಳ್ಳಿಗೆ ಬಂದಿವೆ ಎಂದರು. 
 
ಈ ಭಾಗದಲ್ಲಿ ತಂತ್ರಜ್ಞಾನ ಮತ್ತು ಆವಿಷ್ಕಾರ ದಿಕ್ಕಿನಲ್ಲಿ ಬಹಳಷ್ಟು ಪ್ರಗತಿ ಆಗುತ್ತಿದೆ. ಮುಖ್ಯವಾಗಿ ಇಎಸ್‌ಡಿಎಂ ಕ್ಷೇತ್ರದಲ್ಲಿ ಮಹತ್ವದ ಅಭಿವೃದ್ಧಿ ಕಾಣುತ್ತಿದೆ. ಇನ್ನಷ್ಟು ಪ್ರೋತ್ಸಾಹ ನೀಡಿ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗುವುದು ಎಂದು ಡಿಸಿಎಂ ಅವರು ಹೇಳಿದರು. 
 
ʼಬಿಯಾಂಡ್‌ ಬೆಂಗಳೂರುʼ ಮೂಲಕ ಬೆಂಗಳೂರು ಹೊರಗಿನ ನಗರಗಳ ಅಭಿವೃದ್ಧಿಗೆ ಪ್ರಾಮುಖ್ಯತೆ ಕೊಡಲಾಗಿದೆ. ಅದರ ಮೂಲಕವೇ ಮತ್ತಷ್ಟು ಕಂಪನಿಗಳು ಹುಬ್ಬಳ್ಳಿಗೆ ಬರಲಿವೆ. ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್‌ನಿಂದ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹಾಗೂ ಕೈಗಾರಿಕೆಗಳು ಬೆಳೆಯಲು ಬಹಳಷ್ಟು ಸಹಕಾರಿ ಆಗುತ್ತಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ದೊಡ್ಡ ಪ್ರಮಾಣದಲ್ಲಿ ಬಳಕೆ ಮಾಡಲಾಗುತ್ತಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು. 
 
ಹಿನ್ನಡೆ ಆಗಿಲ್ಲ: 
 
ಹುಬ್ಬಳ್ಳಿ ಭಾಗದಲ್ಲಿ ಕೈಗಾರಿಕೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಹಿನ್ನಡೆಯಾಗಿಲ್ಲ. ಮಾರುಕಟ್ಟೆಗೆ ತಕ್ಕಂತೆ ಕೆಲ ವ್ಯತ್ಯಾಸಗಳಾಗುತ್ತವೆಯೇ ವಿನಾ, ಅದನ್ನು ಹಿನ್ನಡೆ ಎನ್ನಲಾಗದು. ಇನ್ಫೋಸಿಸ್‌, ದೇಶಪಾಂಡೆ ಫೌಂಡೇಶ್‌ ವತಿಯಿಂದ ಈ ಭಾಗದಲ್ಲಿ ಇನ್ನೂ ದೊಡ್ಡ ಪ್ರಮಾಣದ ಬದಲಾವಣೆ ಆಗಲಿದೆ. ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಈ ಭಾಗದ ಬೆಳವಣಿಗೆಗೆ ಭಾರೀ ಕೊಡುಗೆ ನೀಡಲಿದೆ ಎಂದು ಡಿಸಿಎಂ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಂದಿ, ನಾಮ ಹಾಕಬಾರದು, ಹಿಜಾಬ್‌ಗೆ ಓಕೆ: ಲೆನ್ಸ್ ಕಾರ್ಟ್ ಸಂಸ್ಥೆ ಡ್ರೆಸ್ ಕೋಡ್ ವಿವಾದಕ್ಕೆ ಸಿಇಒ ಪ್ರತಿಕ್ರಿಯೆ

ಇದು ಕೇವಲ ಒಂದು ದಿನದ ರಜೆಯಲ್ಲ, ಮಹಿಳೆಯ ಘನತೆಯ ವಿಷಯ

ಹಿಂದೂ ಹುಡುಗಿರನ್ನು ಮದುವೆಯಾಗಿ, ಮತಾಂತರ ಮಾಡಿ, ನಾಸಿಕ್‌ ಐಟಿ ಕಂಪನಿಯೊಳಗೆ ಲವ್‌ ಜಿಹಾದ್‌

ಜಾತಿ ಆಧಾರಿತ ಜನಗಣತಿ ತಪ್ಪಿಸಲು ಬಿಜೆಪಿ ಯತ್ನ: ಅಖಿಲೇಶ್ ಯಾದವ್‌

ಮುಂದಿನ ಸುದ್ದಿ
Show comments