Select Your Language

Notifications

webdunia
webdunia
webdunia
webdunia

ಕರ್ನಾಟಕದಲ್ಲೂ ನೀಟ್ ರದ್ದು ಮಾಡುವ ಬಗ್ಗೆ ಸುಳಿವು ನೀಡಿದ ಡಿಸಿಎಂ ಡಿಕೆ ಶಿವಕುಮಾರ್

DK Shivakumar

Krishnaveni K

ಬೆಂಗಳೂರು , ಬುಧವಾರ, 19 ಜೂನ್ 2024 (09:19 IST)
ಬೆಂಗಳೂರು: ವೈದ್ಯಕೀಯ ಕೋರ್ಸ್ ಗಳಿಗೆ ಅರ್ಹತೆ ಪಡೆಯಲು ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆ ನೀಟ್ ರದ್ದುಗೊಳಿಸುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ.

ತಮಿಳುನಾಡಿನಲ್ಲಿ ಈಗಾಗಲೇ ನೀಟ್ ರದ್ದುಗೊಳಿಸಲಾಗಿದೆ. ಕರ್ನಾಟಕದಲ್ಲೂ ಇದೇ ಮಾದರಿಯಲ್ಲಿ ನೀಟ್ ರದ್ದುಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಇತ್ತೀಚೆಗೆ ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮ ಆರೋಪಗಳ ಬೆನ್ನಲ್ಲೇ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ಇತ್ತೀಚೆಗಿನ ದಿನಗಳಲ್ಲಿ ನೀಟ್ ಪರೀಕ್ಷೆ ಎನ್ನುವುದು ವ್ಯಾಪಾರೀಕರಣವಾಗುತ್ತಿದೆ. ದ್ವಿತೀಯ ಪಿಯು ಪರೀಕ್ಷೆಯಲ್ಲದೆ, ವಿದ್ಯಾರ್ಥಿಗಳು ಸಾವಿರಾರು ರೂಪಾಯಿ ಫೀಸ್ ಕೊಟ್ಟು ವಿಶೇಷವಾಗಿ ನೀಟ್ ಪರೀಕ್ಷೆಗೆ ಕೋಚಿಂಗ್ ತೆಗೆದುಕೊಳ್ಳಬೇಕಾಗುತ್ತದೆ. ಇದು ಬಡ ವಿದ್ಯಾರ್ಥಿಗಳಿಗೆ ಹೊರೆಯಾಗುತ್ತಿದೆ.

ಇದರಿಂದಾಗಿ ಬಡ ವಿದ್ಯಾರ್ಥಿಗಳು ನೀಟ್ ಪ್ರವೇಶ ಪರೀಕ್ಷೆ ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿ ತಮಿಳುನಾಡು ಈಗಾಗಲೇ ನೀಟ್ ರದ್ದುಗೊಳಿಸುವ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿತ್ತು. ನೀಟ್ ಬದಲು ವೈದ್ಯಕೀಯ ಕೋರ್ಸ್ ಗಳಿಗೆ ದ್ವಿತೀಯ ಪಿಯು ಅಂಕವನ್ನೇ ಪರಿಗಣಿಸಲು ಮುಂದಾಗಿತ್ತು. ಇದೀಗ ಕರ್ನಾಟಕದಲ್ಲೂ ಅದೇ ಮಾದರಿಯಲ್ಲಿ ನೀಟ್ ರದ್ದುಗೊಳಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಿಮ್ಮ ನಂಬಿಕೆಯೇ ನನ್ನ ಶಕ್ತಿ: ವಾರಣಾಸಿ ಜನತೆಗೆ ಮೋದಿ ನಮನ