Select Your Language

Notifications

webdunia
webdunia
webdunia
webdunia

ರಾತ್ರೋ ರಾತ್ರಿ ರಸ್ತೆಗಿಳಿದ ಡಿಸಿಎಂ ಡಿಕೆ ಶಿವಕುಮಾರ್

DK Shivakumar

Krishnaveni K

ಬೆಂಗಳೂರು , ಮಂಗಳವಾರ, 26 ಆಗಸ್ಟ್ 2025 (09:29 IST)
Photo Credit: X

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆಗಳ ಸ್ಥಿತಿ ಎಲ್ಲರಿಗೂ ಗೊತ್ತಿರುವಂತದ್ದೇ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ರಾತ್ರೋ ರಾತ್ರಿ ರಸ್ತೆಗಿಳಿದು ಪರಿಶೀಲನೆ ನಡೆಸಿದ್ದಾರೆ.

ನಿನ್ನೆ ತಡರಾತ್ರಿಯವರೆಗೂ ಡಿಕೆಶಿ ನೈಟ್ ರೌಂಡ್ಸ್ ನಡೆಸಿದರು. ಸುಗಮ ಸಂಚಾರಕ್ಕೆ ನಾವು ಸದಾ ಬದ್ಧ ಎಂದು ಡಿಕೆಶಿ ಹೇಳಿದ್ದಾರೆ. ಒಂದು ಮಳೆ ಬಂದ ಬೆನ್ನಲ್ಲೇ ಬೆಂಗಳೂರಿನ ರಸ್ತೆಗಳು ಗುಂಡಿ ಬಿದ್ದು ಹೋಗಿವೆ. ಹೀಗಾಗಿ ಈಗ ಸ್ವತಃ ಡಿಸಿಎಂ ರಂಗಕ್ಕಿಳಿದಿದ್ದಾರೆ.

‘ಇಂದು ಯಲಹಂಕ ವಿಧಾನಸಭಾ ಕ್ಷೇತ್ರದ ಬಾಗಲೂರು ಬಸ್ ನಿಲ್ದಾಣದ ಬಳಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿಯ ಗುಣಮಟ್ಟವನ್ನು ಖುದ್ದು ಪರಿಶೀಲಿಸಿದೆ.


ರಸ್ತೆಗುಂಡಿಗಳನ್ನು ಕೂಡಲೇ ಮುಚ್ಚಿ, ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಸ್ತೆ ಗುಂಡಿಗಳ ಬಗ್ಗೆ ಸಾರ್ವಜನಿಕರು ಸುಲಭವಾಗಿ ಮಾಹಿತಿ ನೀಡಲು, 'ಗುಂಡಿ ಗಮನ' ಎಂಬ ಮೊಬೈಲ್ ಆ್ಯಪ್ ಅನ್ನು ಸಹ ಬಿಡುಗಡೆ ಮಾಡಲಾಗಿದೆ. ಈ ಅಪ್ಲಿಕೇಶನ್ ಮೂಲಕ ಸಾರ್ವಜನಿಕರು ರಸ್ತೆ ಗುಂಡಿಗಳ ಬಗ್ಗೆ ಮಾಹಿತಿ ನೀಡಿದರೆ, ನಾವು ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುತ್ತೇವೆ' ಎಂದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಗಣೇಶ ವಿಸರ್ಜನೆ ಮಾಡಲು ಬೆಂಗಳೂರಿನವರಿಗೆ ನಿಗದಿತ ಕೇಂದ್ರಗಳ ಲಿಸ್ಟ್ ಇಲ್ಲಿದೆ