ಬೆಂಗಳೂರು: ಕರ್ನಾಟಕ ಬಜೆಟ್ ನಲ್ಲಿ ಸರ್ಕಾರೀ ಕಾಮಗಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಿರುವ ಬಗ್ಗೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್ ನಮ್ಮದು ದೇಶದಲ್ಲೇ ಬೆಸ್ಟ್ ಬಜೆಟ್ ಎಂದು ಕೊಂಡಾಡಿದ್ದಾರೆ. ಜೊತೆಗೆ ಮುಸ್ಲಿಮ್ ಮೀಸಲಾತಿ ಕುರಿತಾದ ವಿಪಕ್ಷಗಳ ಟೀಕೆಗಳಿಗೂ ಉತ್ತರಿಸಿದ್ದಾರೆ.
ತೇಜಸ್ವಿ ಸೂರ್ಯ ಮುಸ್ಲಿಮರು ಪಂಕ್ಚರ್ ಹಾಕಿಕೊಂಡು ಇರ್ತಾರೆ ಎಂದಿದ್ದರು. ಅವರು ವಿದ್ಯಾವಂತರಿದ್ದಾರೆ, ಬುದ್ಧಿವಂತರಿದ್ದಾರೆ. ಇದೀಗ ಮುಸ್ಲಿಮರಿಗೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಕೊಟ್ಟಿದ್ದೇವೆ. ಅವರಿಗೆಲ್ಲಾ ಸಣ್ಣ ಮಟ್ಟದಲ್ಲಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಮೀಸಲಾತಿ ಕೊಟ್ಟಿದ್ದೇವೆ.
ಎಲ್ಲರಿಗೂ ಅವಕಾಶವಿರುತ್ತದೆ. ಆದರೆ ಮುಸ್ಲಿಮರು, ಪರಿಶಿಷ್ಟ ಜಾತಿಯವರಿಗೂ ಆರ್ಥಿಕವಾಗಿ ಶಕ್ತಿ ಕೊಡಬೇಕು ಎಂದು ಇಡೀ ದೇಶದಲ್ಲೇ ಇದೇ ಮೊದಲ ಬಾರಿಗೆ ಮೀಸಲಾತಿ ಕೊಟ್ಟಿದ್ದೇವೆ ಎಂದು ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.