Select Your Language

Notifications

webdunia
webdunia
webdunia
webdunia

ಆರನೇ ಗ್ಯಾರಂಟಿ ಘೋಷಿಸಿದ ಡಿಸಿಎಂ ಡಿಕೆ ಶಿವಕುಮಾರ್‌, ಏನ್ ಗೊತ್ತಾ

DK Shivkumar
ಹಾವೇರಿ: ವಿಧಾನಸಭೆ ಚುನಾವಣೆ ಮುನ್ನಾ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿದ್ದ ಪಂಚ ಗ್ಯಾರಂಟಿಗಳ ಜತೆಗೆ ಆರನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿ ನೀಡುತ್ತಿದೆ. ಕೇಂದ್ರ ಸರ್ಕಾರ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ, ಎತ್ತಿನಹೊಳೆಗೆ ಅನುಮತಿ ಕೊಟ್ಟರೆ ಏಳನೇ ಗ್ಯಾರಂಟಿಯಾಗಿ ನೀರಿನ ಗ್ಯಾರಂಟಿ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಘೋಷಣೆ ಮಾಡಿದರು.

ಹಾವೇರಿಯಲ್ಲಿ ಶನಿವಾರ ನಡೆದ ಜನಸೇವೆಯಲ್ಲಿ ಸಾರ್ಥಕ ಸಾವಿರ ದಿನ, ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

ನಾನು ಚುನಾವಣೆಗೆ ಬಂದಾಗ ಒಂದು ಮಾತು ಹೇಳಿದ್ದೆ. ಕಮಲ ಕೆರೆಯಲ್ಲಿದ್ದರೆ ಚಂದ, ತೆನೆ ಹೊಲದಲ್ಲಿದ್ದರೆ ಚಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚಂದ. ಈ ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿರುವ ಹಿನ್ನೆಲೆ ಪಂಚ ಗ್ಯಾರಂಟಿ ನೀಡಿದ್ದು, ಇದೀಗ ಆರನೇ ಗ್ಯಾರಂಟಿ ಭೂಮಿ ಗ್ಯಾರಂಟಿ ನೀಡುತ್ತಿದ್ದೇವೆ ಎಂದರು. 

ಭೂ ದಾಖಲೆ ಇಲ್ಲದ 1,11,111 ಜನರಿಗೆ ಪೋಡಿ ಮಾಡಿ, ಖಾತಾ ಮಾಡಿ ದಾಖಲೆ ನೀಡಲಾಗಿದೆ. ಆಮೂಲಕ ನಿಮ್ಮ ಮುಂದಿನ ಪೀಳಿಗೆಗೆ ಆಸ್ತಿ ದಾಖಲೆ ಕೊಟ್ಟ ಏಕೈಕ ಸರ್ಕಾರ ಈ ಕಾಂಗ್ರೆಸ್ ಸರ್ಕಾರ ಎಂದು ತಿಳಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಮಣಿಪಾಲದ ಹೋಟೆಲ್‌ನಲ್ಲಿ NSUI ಉಪಾಧ್ಯಕ್ಷರ ಮೇಲೆ ಹಲ್ಲೆ, 5ಅರೆಸ್ಟ್‌