ಸರಕಾರದ ಅಭದ್ರತೆ ಬಗ್ಗೆ ಅಧಿಕಾರಿಗಳು ಚರ್ಚೆ ಮಾಡಬೇಡಿ ಎಂದ ಡಿಸಿಎಂ

Webdunia
ಬುಧವಾರ, 12 ಜೂನ್ 2019 (19:05 IST)
ರಾಜ್ಯ ಸರಕಾರ ಅಭದ್ರವಾಗಿದೆ ಎಂದು ಅಧಿಕಾರಿಗಳು ತಮಾಷೆಯಾಗಿಯೂ ಸಹ ಚರ್ಚೆ ಮಾಡಬಾರದು. ಹೀಗಂತ ಡಿಸಿಎಂ ಹೇಳಿದ್ದಾರೆ.

ಸರಕಾರವನ್ನು ಭದ್ರವಾಗಿ ಇಟ್ಟುಕೊಳ್ಳುವ ಬಗ್ಗೆ ನಾವು ನೋಡಿಕೊಳ್ಳುತ್ತೇವೆ. ಆ ವಿಷಯ ಅಧಿಕಾರಿಗಳಿಗೆ ಬೇಕಿಲ್ಲ. ಈ ಬಗ್ಗೆ ನೀವು ಚರ್ಚೆ ಮಾಡಿದರೆ ಸುಲಲಿತ ಆಡಳಿತ ನೀಡಲು ಸಾಧ್ಯವಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿಗಳು ಕರೆದಿದ್ದ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮ್ಮೇಳನ ಸಭೆಯಲ್ಲಿ ಮಾತನಾಡಿದರು.

ಸರಕಾರ ಸುಭದ್ರವಾಗಿಲ್ಲ ಎಂದು ಅಧಿಕಾರಿಗಳು ಚರ್ಚೆ ಮಾಡುತ್ತಿರುವ ಬಗ್ಗೆ ಗಮನಿಸಿದ್ದೇನೆ. ಈ ಬೆಳವಣಿಗೆ ಸರಿಯಲ್ಲ. ಈ ಬಗ್ಗೆ ಅಧಿಕಾರಿಗಳು ತಲೆಕೆಡಿಸಿಕೊಳ್ಳದೇ ಕೆಲಸ ಮಾಡುವಂತೆ ಸೂಚನೆ ನೀಡಿದರು.

ರಾಜ್ಯದಲ್ಲಿ ಶೇ.90 ರಷ್ಟು ಜನ ಬಿಎಂಪಿಎಲ್‌ ಪಡಿತರ ಚೀಟಿ ಹೊಂದಿದ್ದಾರೆ. ಅಭಿವೃದ್ಧಿಶೀಲ ರಾಜ್ಯವಾದ ಕರ್ನಾಟಕದಲ್ಲಿ ಇಷ್ಟು ಪ್ರಮಾಣದ ಬಡವರು ಇದ್ದಾರಾ? ಐಟಿಬಿಟಿ ಸಿಟಿ ಎಂದೇ ನಮ್ಮ ರಾಜ್ಯ ಖ್ಯಾತಿ ಹೊಂದುತ್ತಿದೆ. ಹೀಗಿರುವಾಗ ಇಷ್ಟು ಪ್ರಮಾಣದ ಬಡವರು ಇರಲು ಹೇಗೆ ಸಾಧ್ಯ? ಇಲಾಖೆ ಯಾವ ಮಾನದಂಡದಲ್ಲಿ ಬಿಪಿಎಲ್‌ ಕಾರ್ಡ್‌  ವಿತರಿಸುತ್ತಿದೆ ಎಂದು ಪ್ರಶ್ನಿಸಿದರು. 
ಬಿಪಿಎಲ್‌ ಕಾರ್ಡ್‌ ನೀಡುವ ಮಾನದಂಡ ಹಾಗೂ ಕಾರ್ಡ್‌ ವಿತರಣೆ ಬಗ್ಗೆ ಮರುಪರಿಶೀಲನೆ ಮಾಡುವ ಅಗತ್ಯವಿದೆ ಎಂದು ಅಭಿಪ್ರಾಯ ಪಟ್ಟರು.

ರಾಜ್ಯ ಸರಕಾರ ರೈತರ ನೆರವಿಗೆ ಧಾವಿಸಿ ಸಾಲಮನ್ನಾ ಮಾಡಿದೆ. ಈ ಫಲ ರೈತರಿಗೆ ತಲುಪಿಸುವಲ್ಲಿ ಅಧಿಕಾರಿಗಳ ಪಾತ್ರ ದೊಡ್ಡದಿದೆ. ನೀವು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿದರೆ ಮಾತ್ರ ಸರಕಾರದ ಈ ಕ್ರಮ ರೈತರಿಗೆ ಮುಟ್ಟಲು ಸಾಧ್ಯ. ಅದೇರೀತಿ ಮನೆ ನೀರ್ಮಾಣ, ಗಂಗಾಕಲ್ಯಾಣ ಯೋಜನೆ ಸೇರಿದಂತೆ ಆದ್ಯತಾ ಯೋಜನೆಗಳು ಶೀಘ್ರವಾಗಿ ಜನರಿಗೆ ತಲುಪುವ ವ್ಯವಸ್ಥೆ ಆಗಬೇಕು ಎಂದು ಹೇಳಿದರು.

ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಉಪಸ್ಥಿತರಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ವಯನಾಡಿಗೆ ಮತ್ತೆ 10 ಕೋಟಿ ರೂ ಕರ್ನಾಟಕ ನೆರವು: ಕೇರಳ ಸಿಎಂ ಸಿದ್ದು ಎಂದ ಅಶೋಕ್

ಧುರಂಧರ್ ಸಿನಿಮಾದಿಂದ ಮಂಡೆಬಿಸಿ: ಬೀದಿಯಲ್ಲಿರುವ ಭಿಕ್ಷುಕ್ಷರ ಮೇಲೆ ಪಾಕಿಸ್ತಾನಕ್ಕೆ ಈಗ ಅದೇ ಡೌಟು Video

ಕಳ್ಳತನವಾಗಿದ್ದ ನಾಯಿಗಳು ದಾರಿ ಮಧ್ಯೆ ತಪ್ಪಿಸಿಕೊಂಡು 17 ಕಿಮೀ ಪ್ರಯಾಣಿಸಿ ಮನೆ ತಲುಪಿದ್ರು Video

ತನ್ನ ದ್ವಿಚಕ್ರ ವಾಹನದಲ್ಲೇ ಹಕ್ಕಿಯೊಂದು ಮರಿ ಹಾಕಿತೆಂದು ಈ ವ್ಯಕ್ತಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Video

ಐದು ದಿನ ಯುದ್ಧ ಮಾಡಲ್ಲ ಎಂದ ಟ್ರಂಪ್: ಸೋಲಿನ ಹೆದರಿಕೆ ಎಂದು ವ್ಯಂಗಯ ಮಾಡಿದ ಇರಾನ್

ಮುಂದಿನ ಸುದ್ದಿ
Show comments